2 ಪೂರ್ವಕಾಲವೃತ್ತಾಂತ Chapter 18 KANIRV Bible Verse Images

2 ಪೂರ್ವಕಾಲವೃತ್ತಾಂತ 18 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಪೂರ್ವಕಾಲವೃತ್ತಾಂತ 18 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಪೂರ್ವಕಾಲವೃತ್ತಾಂತ 18:1 (KANIRV)
Square Portrait Landscape 4K UHD
ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.

2 ಪೂರ್ವಕಾಲವೃತ್ತಾಂತ 18:2 (KANIRV)
Square Portrait Landscape 4K UHD
ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.

2 ಪೂರ್ವಕಾಲವೃತ್ತಾಂತ 18:3 (KANIRV)
Square Portrait Landscape 4K UHD
ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.

2 ಪೂರ್ವಕಾಲವೃತ್ತಾಂತ 18:4 (KANIRV)
Square Portrait Landscape 4K UHD
ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಇಂದು ಯೆಹೋವನ ಆಲೋಚನೆಯನ್ನು ಕೇಳು” ಎಂದು ಕೇಳಿಕೊಂಡನು.

2 ಪೂರ್ವಕಾಲವೃತ್ತಾಂತ 18:5 (KANIRV)
Square Portrait Landscape 4K UHD
ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.

2 ಪೂರ್ವಕಾಲವೃತ್ತಾಂತ 18:6 (KANIRV)
Square Portrait Landscape 4K UHD
ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು.

2 ಪೂರ್ವಕಾಲವೃತ್ತಾಂತ 18:7 (KANIRV)
Square Portrait Landscape 4K UHD
ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.

2 ಪೂರ್ವಕಾಲವೃತ್ತಾಂತ 18:8 (KANIRV)
Square Portrait Landscape 4K UHD
ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.

2 ಪೂರ್ವಕಾಲವೃತ್ತಾಂತ 18:9 (KANIRV)
Square Portrait Landscape 4K UHD
ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.

2 ಪೂರ್ವಕಾಲವೃತ್ತಾಂತ 18:10 (KANIRV)
Square Portrait Landscape 4K UHD
ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.

2 ಪೂರ್ವಕಾಲವೃತ್ತಾಂತ 18:11 (KANIRV)
Square Portrait Landscape 4K UHD
ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.

2 ಪೂರ್ವಕಾಲವೃತ್ತಾಂತ 18:12 (KANIRV)
Square Portrait Landscape 4K UHD
ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.

2 ಪೂರ್ವಕಾಲವೃತ್ತಾಂತ 18:13 (KANIRV)
Square Portrait Landscape 4K UHD
ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.

2 ಪೂರ್ವಕಾಲವೃತ್ತಾಂತ 18:14 (KANIRV)
Square Portrait Landscape 4K UHD
ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.

2 ಪೂರ್ವಕಾಲವೃತ್ತಾಂತ 18:15 (KANIRV)
Square Portrait Landscape 4K UHD
ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು

2 ಪೂರ್ವಕಾಲವೃತ್ತಾಂತ 18:16 (KANIRV)
Square Portrait Landscape 4K UHD
ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.

2 ಪೂರ್ವಕಾಲವೃತ್ತಾಂತ 18:17 (KANIRV)
Square Portrait Landscape 4K UHD
ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.

2 ಪೂರ್ವಕಾಲವೃತ್ತಾಂತ 18:18 (KANIRV)
Square Portrait Landscape 4K UHD
ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.

2 ಪೂರ್ವಕಾಲವೃತ್ತಾಂತ 18:19 (KANIRV)
Square Portrait Landscape 4K UHD
ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.

2 ಪೂರ್ವಕಾಲವೃತ್ತಾಂತ 18:20 (KANIRV)
Square Portrait Landscape 4K UHD
ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,

2 ಪೂರ್ವಕಾಲವೃತ್ತಾಂತ 18:21 (KANIRV)
Square Portrait Landscape 4K UHD
ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.

2 ಪೂರ್ವಕಾಲವೃತ್ತಾಂತ 18:22 (KANIRV)
Square Portrait Landscape 4K UHD
ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.

2 ಪೂರ್ವಕಾಲವೃತ್ತಾಂತ 18:23 (KANIRV)
Square Portrait Landscape 4K UHD
ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.

2 ಪೂರ್ವಕಾಲವೃತ್ತಾಂತ 18:24 (KANIRV)
Square Portrait Landscape 4K UHD
ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು.

2 ಪೂರ್ವಕಾಲವೃತ್ತಾಂತ 18:25 (KANIRV)
Square Portrait Landscape 4K UHD
ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.

2 ಪೂರ್ವಕಾಲವೃತ್ತಾಂತ 18:26 (KANIRV)
Square Portrait Landscape 4K UHD
ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.

2 ಪೂರ್ವಕಾಲವೃತ್ತಾಂತ 18:27 (KANIRV)
Square Portrait Landscape 4K UHD
ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು.

2 ಪೂರ್ವಕಾಲವೃತ್ತಾಂತ 18:28 (KANIRV)
Square Portrait Landscape 4K UHD
ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.

2 ಪೂರ್ವಕಾಲವೃತ್ತಾಂತ 18:29 (KANIRV)
Square Portrait Landscape 4K UHD
ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.

2 ಪೂರ್ವಕಾಲವೃತ್ತಾಂತ 18:30 (KANIRV)
Square Portrait Landscape 4K UHD
ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.

2 ಪೂರ್ವಕಾಲವೃತ್ತಾಂತ 18:31 (KANIRV)
Square Portrait Landscape 4K UHD
ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.

2 ಪೂರ್ವಕಾಲವೃತ್ತಾಂತ 18:32 (KANIRV)
Square Portrait Landscape 4K UHD
ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂತಿರುಗಿದರು.

2 ಪೂರ್ವಕಾಲವೃತ್ತಾಂತ 18:33 (KANIRV)
Square Portrait Landscape 4K UHD
ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.

2 ಪೂರ್ವಕಾಲವೃತ್ತಾಂತ 18:34 (KANIRV)
Square Portrait Landscape 4K UHD
ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.

Available Bible Translations

American Standard Version
2 Chronicles 18 (ASV) »
King James Version
2 Chronicles 18 (KJV) »
GOD’S WORD® (GW)
2 Chronicles 18 (GW) »
World English Bible
2 Chronicles 18 (WEB) »
Louis Segond 1910
2 Chroniques 18 (LSG) »
इंडियन रिवाइज्ड वर्जन - हिंदी
2 इतिहास 18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਇਤਿਹਾਸ 18 (PANIRV) »
ভারতীয় সংশোধিত সংস্করণ - বাংলা
2 বংশাৱলি 18 (BENIRV) »
இந்தியன் ரீவைஸ்டு வேர்ஷன் - தமிழ்
2 நாளாகமம் 18 (TAMIRV) »
इंडियन रिवाइज्ड वर्जन - मराठी
2 इतिहास 18 (MARIRV) »
ఇండియన్ రేవిజ్డ్ వెర్షన్ - తెలుగు
2 దినవృత్తాంతాలు 18 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કાળવૃતાંત 18 (GUJIRV) »
الكتاب المقدس باللغة العربية، فان دايك
٢ أخبار 18 (AVD) »
תנ ך עברי מודרני
דברי הימים ב 18 (HEB) »
Bíblia Sagrada Português
2 Crônicas 18 (BSL) »
Kinh Thánh: Tiếng Việt
2 Sử Ký 18 (VIE) »
Reina Valera Antigua
2 Crónicas 18 (RVA) »
圣 经 简体中文和合本
历 代 志 下 18 (CUVS) »
聖 經 繁體中文和合本
歷 代 志 下 18 (CUVT) »
Bibla e Shenjtë
2 Kronikave 18 (ALB) »
Библия на русском
2 Паралипоменон 18 (RUSV) »
Українська Біблія
2 хроніки 18 (UKR) »
Szent Biblia - Magyar
2 Krónika 18 (KAR) »
Българска Библия
2 Летописи 18 (BULG) »
De Heilige Schrift
2 Kronieken 18 (NLD) »

2 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List