2 ಸಮುವೇಲನು Chapter 15 KANIRV Bible Verse Images

2 ಸಮುವೇಲನು 15 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಸಮುವೇಲನು 15 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಸಮುವೇಲನು 15:1 (KANIRV)
Square Portrait Landscape 4K UHD
ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.

2 ಸಮುವೇಲನು 15:2 (KANIRV)
Square Portrait Landscape 4K UHD
ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.

2 ಸಮುವೇಲನು 15:3 (KANIRV)
Square Portrait Landscape 4K UHD
ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.

2 ಸಮುವೇಲನು 15:4 (KANIRV)
Square Portrait Landscape 4K UHD
ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.

2 ಸಮುವೇಲನು 15:5 (KANIRV)
Square Portrait Landscape 4K UHD
ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.

2 ಸಮುವೇಲನು 15:6 (KANIRV)
Square Portrait Landscape 4K UHD
ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.

2 ಸಮುವೇಲನು 15:7 (KANIRV)
Square Portrait Landscape 4K UHD
ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.

2 ಸಮುವೇಲನು 15:8 (KANIRV)
Square Portrait Landscape 4K UHD
ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.

2 ಸಮುವೇಲನು 15:9 (KANIRV)
Square Portrait Landscape 4K UHD
ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.

2 ಸಮುವೇಲನು 15:10 (KANIRV)
Square Portrait Landscape 4K UHD
ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.

2 ಸಮುವೇಲನು 15:11 (KANIRV)
Square Portrait Landscape 4K UHD
ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.

2 ಸಮುವೇಲನು 15:12 (KANIRV)
Square Portrait Landscape 4K UHD
ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

2 ಸಮುವೇಲನು 15:13 (KANIRV)
Square Portrait Landscape 4K UHD
ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.

2 ಸಮುವೇಲನು 15:14 (KANIRV)
Square Portrait Landscape 4K UHD
ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು.

2 ಸಮುವೇಲನು 15:15 (KANIRV)
Square Portrait Landscape 4K UHD
ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.

2 ಸಮುವೇಲನು 15:16 (KANIRV)
Square Portrait Landscape 4K UHD
ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.

2 ಸಮುವೇಲನು 15:17 (KANIRV)
Square Portrait Landscape 4K UHD
ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.

2 ಸಮುವೇಲನು 15:18 (KANIRV)
Square Portrait Landscape 4K UHD
ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.

2 ಸಮುವೇಲನು 15:19 (KANIRV)
Square Portrait Landscape 4K UHD
ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.

2 ಸಮುವೇಲನು 15:20 (KANIRV)
Square Portrait Landscape 4K UHD
ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.

2 ಸಮುವೇಲನು 15:21 (KANIRV)
Square Portrait Landscape 4K UHD
ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.

2 ಸಮುವೇಲನು 15:22 (KANIRV)
Square Portrait Landscape 4K UHD
ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.

2 ಸಮುವೇಲನು 15:23 (KANIRV)
Square Portrait Landscape 4K UHD
ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.

2 ಸಮುವೇಲನು 15:24 (KANIRV)
Square Portrait Landscape 4K UHD
ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.

2 ಸಮುವೇಲನು 15:25 (KANIRV)
Square Portrait Landscape 4K UHD
ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.

2 ಸಮುವೇಲನು 15:26 (KANIRV)
Square Portrait Landscape 4K UHD
ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.

2 ಸಮುವೇಲನು 15:27 (KANIRV)
Square Portrait Landscape 4K UHD
ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.

2 ಸಮುವೇಲನು 15:28 (KANIRV)
Square Portrait Landscape 4K UHD
ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು.

2 ಸಮುವೇಲನು 15:29 (KANIRV)
Square Portrait Landscape 4K UHD
ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.

2 ಸಮುವೇಲನು 15:30 (KANIRV)
Square Portrait Landscape 4K UHD
ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.

2 ಸಮುವೇಲನು 15:31 (KANIRV)
Square Portrait Landscape 4K UHD
ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.

2 ಸಮುವೇಲನು 15:32 (KANIRV)
Square Portrait Landscape 4K UHD
ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.

2 ಸಮುವೇಲನು 15:33 (KANIRV)
Square Portrait Landscape 4K UHD
ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ.

2 ಸಮುವೇಲನು 15:34 (KANIRV)
Square Portrait Landscape 4K UHD
ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.

2 ಸಮುವೇಲನು 15:35 (KANIRV)
Square Portrait Landscape 4K UHD
ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ.

2 ಸಮುವೇಲನು 15:36 (KANIRV)
Square Portrait Landscape 4K UHD
ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.

2 ಸಮುವೇಲನು 15:37 (KANIRV)
Square Portrait Landscape 4K UHD
ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.

Available Bible Translations

American Standard Version
2 Samuel 15 (ASV) »
King James Version
2 Samuel 15 (KJV) »
GOD’S WORD® (GW)
2 Samuel 15 (GW) »
World English Bible
2 Samuel 15 (WEB) »
Louis Segond 1910
2 Samuel 15 (LSG) »
इंडियन रिवाइज्ड वर्जन - हिंदी
2 शमूएल 15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 15 (PANIRV) »
ভারতীয় সংশোধিত সংস্করণ - বাংলা
2 চমূৱেল 15 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 15 (TAMIRV) »
इंडियन रिवाइज्ड वर्जन - मराठी
2 शमुवेल 15 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 15 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 15 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 15 (AVD) »
תנ ך עברי מודרני
שמואל ב 15 (HEB) »
Bíblia Sagrada Português
2 Samuel 15 (BSL) »
Kinh Thánh: Tiếng Việt
2 Sa-mu-ên 15 (VIE) »
Reina Valera Antigua
2 Samuel 15 (RVA) »
La Sacra Bibbia
2 Samuele 15 (RIV) »
圣 经 简体中文和合本
撒 母 耳 记 下 15 (CUVS) »
聖 經 繁體中文和合本
撒 母 耳 記 下 15 (CUVT) »
Bibla e Shenjtë
2 Samuelit 15 (ALB) »
Библия на русском
2 Царств 15 (RUSV) »
Українська Біблія
2 Самуїлова 15 (UKR) »
Szent Biblia - Magyar
2 Sámuel 15 (KAR) »
Българска Библия
2 Царе 15 (BULG) »
Kitaabka Quduuska Ah
Samuu'eel Labaad 15 (SOM) »
De Heilige Schrift
2 Samuël 15 (NLD) »
Dansk Bibel 1871
2 Samuel 15 (DA1871) »

2 ಸಮುವೇಲನು (KANIRV) Chapter Selection

KANIRV Book Selection List