ಅಪೊಸ್ತಲರ ಕೃತ್ಯಗಳು Chapter 18 KANIRV Bible Verse Images

ಅಪೊಸ್ತಲರ ಕೃತ್ಯಗಳು 18 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅಪೊಸ್ತಲರ ಕೃತ್ಯಗಳು 18 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅಪೊಸ್ತಲರ ಕೃತ್ಯಗಳು 18:1 (KANIRV)
Square Portrait Landscape 4K UHD
ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.

ಅಪೊಸ್ತಲರ ಕೃತ್ಯಗಳು 18:2 (KANIRV)
Square Portrait Landscape 4K UHD
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.

ಅಪೊಸ್ತಲರ ಕೃತ್ಯಗಳು 18:3 (KANIRV)
Square Portrait Landscape 4K UHD
ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.

ಅಪೊಸ್ತಲರ ಕೃತ್ಯಗಳು 18:4 (KANIRV)
Square Portrait Landscape 4K UHD
ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

ಅಪೊಸ್ತಲರ ಕೃತ್ಯಗಳು 18:5 (KANIRV)
Square Portrait Landscape 4K UHD
ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.

ಅಪೊಸ್ತಲರ ಕೃತ್ಯಗಳು 18:6 (KANIRV)
Square Portrait Landscape 4K UHD
ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,

ಅಪೊಸ್ತಲರ ಕೃತ್ಯಗಳು 18:7 (KANIRV)
Square Portrait Landscape 4K UHD
ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೆಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು.

ಅಪೊಸ್ತಲರ ಕೃತ್ಯಗಳು 18:8 (KANIRV)
Square Portrait Landscape 4K UHD
ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಪೊಸ್ತಲರ ಕೃತ್ಯಗಳು 18:9 (KANIRV)
Square Portrait Landscape 4K UHD
ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,

ಅಪೊಸ್ತಲರ ಕೃತ್ಯಗಳು 18:10 (KANIRV)
Square Portrait Landscape 4K UHD
ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 18:11 (KANIRV)
Square Portrait Landscape 4K UHD
ಅವನು ಒಂದು ವರ್ಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.

ಅಪೊಸ್ತಲರ ಕೃತ್ಯಗಳು 18:12 (KANIRV)
Square Portrait Landscape 4K UHD
ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;

ಅಪೊಸ್ತಲರ ಕೃತ್ಯಗಳು 18:13 (KANIRV)
Square Portrait Landscape 4K UHD
“ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು.

ಅಪೊಸ್ತಲರ ಕೃತ್ಯಗಳು 18:14 (KANIRV)
Square Portrait Landscape 4K UHD
ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.

ಅಪೊಸ್ತಲರ ಕೃತ್ಯಗಳು 18:15 (KANIRV)
Square Portrait Landscape 4K UHD
ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,

ಅಪೊಸ್ತಲರ ಕೃತ್ಯಗಳು 18:16 (KANIRV)
Square Portrait Landscape 4K UHD
ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು.

ಅಪೊಸ್ತಲರ ಕೃತ್ಯಗಳು 18:17 (KANIRV)
Square Portrait Landscape 4K UHD
ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.

ಅಪೊಸ್ತಲರ ಕೃತ್ಯಗಳು 18:18 (KANIRV)
Square Portrait Landscape 4K UHD
ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.

ಅಪೊಸ್ತಲರ ಕೃತ್ಯಗಳು 18:19 (KANIRV)
Square Portrait Landscape 4K UHD
ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.

ಅಪೊಸ್ತಲರ ಕೃತ್ಯಗಳು 18:20 (KANIRV)
Square Portrait Landscape 4K UHD
ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ,

ಅಪೊಸ್ತಲರ ಕೃತ್ಯಗಳು 18:21 (KANIRV)
Square Portrait Landscape 4K UHD
“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,

ಅಪೊಸ್ತಲರ ಕೃತ್ಯಗಳು 18:22 (KANIRV)
Square Portrait Landscape 4K UHD
ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.

ಅಪೊಸ್ತಲರ ಕೃತ್ಯಗಳು 18:23 (KANIRV)
Square Portrait Landscape 4K UHD
ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.

ಅಪೊಸ್ತಲರ ಕೃತ್ಯಗಳು 18:24 (KANIRV)
Square Portrait Landscape 4K UHD
ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.

ಅಪೊಸ್ತಲರ ಕೃತ್ಯಗಳು 18:25 (KANIRV)
Square Portrait Landscape 4K UHD
ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.

ಅಪೊಸ್ತಲರ ಕೃತ್ಯಗಳು 18:26 (KANIRV)
Square Portrait Landscape 4K UHD
ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಅಪೊಸ್ತಲರ ಕೃತ್ಯಗಳು 18:27 (KANIRV)
Square Portrait Landscape 4K UHD
ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.

ಅಪೊಸ್ತಲರ ಕೃತ್ಯಗಳು 18:28 (KANIRV)
Square Portrait Landscape 4K UHD
ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.

Available Bible Translations

American Standard Version
Acts 18 (ASV) »
King James Version
Acts 18 (KJV) »
GOD’S WORD® (GW)
Acts 18 (GW) »
Berean Bible
Acts 18 (BSB) »
World English Bible
Acts 18 (WEB) »
Louis Segond 1910
Actes 18 (LSG) »
इंडियन रिवाइज्ड वर्जन - हिंदी
प्रेरितों के काम 18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰਸੂਲਾਂ ਦੇ ਕਰਤੱਬ 18 (PANIRV) »
ভারতীয় সংশোধিত সংস্করণ - বাংলা
पশিষ্যচরিত 18 (BENIRV) »
இந்தியன் ரீவைஸ்டு வேர்ஷன் - தமிழ்
அப்போஸ்தலருடைய நடபடிகள் 18 (TAMIRV) »
इंडियन रिवाइज्ड वर्जन - मराठी
प्रेषितांचीं कृत्यें 18 (MARIRV) »
ఇండియన్ రేవిజ్డ్ వెర్షన్ - తెలుగు
అపొస్తలుల కార్యములు 18 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રેરિતોનાં ક્રત્યો 18 (GUJIRV) »
الكتاب المقدس باللغة العربية، فان دايك
أَعْمَالُ ٱلرُّسُلِ 18 (AVD) »
תנ ך עברי מודרני
מעשי השליחים 18 (HEB) »
Bíblia Sagrada Português
Atos 18 (BSL) »
Kinh Thánh: Tiếng Việt
Công Vụ Các Sứ đồ 18 (VIE) »
Reina Valera Antigua
Hechos 18 (RVA) »
La Sacra Bibbia
Atti 18 (RIV) »
圣 经 简体中文和合本
使 徒 行 传 18 (CUVS) »
聖 經 繁體中文和合本
使 徒 行 傳 18 (CUVT) »
Библия на русском
Деяния 18 (RUSV) »
Українська Біблія
Дії 18 (UKR) »
Szent Biblia - Magyar
Apostolok 18 (KAR) »
Българска Библия
Деяния 18 (BULG) »
De Heilige Schrift
Handelingen 18 (NLD) »

ಅಪೊಸ್ತಲರ ಕೃತ್ಯಗಳು (KANIRV) Chapter Selection

KANIRV Book Selection List