ಅಪೊಸ್ತಲರ ಕೃತ್ಯಗಳು Chapter 5 KANIRV Bible Verse Images

ಅಪೊಸ್ತಲರ ಕೃತ್ಯಗಳು 5 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅಪೊಸ್ತಲರ ಕೃತ್ಯಗಳು 5 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅಪೊಸ್ತಲರ ಕೃತ್ಯಗಳು 5:1 (KANIRV)
Square Portrait Landscape 4K UHD
ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ

ಅಪೊಸ್ತಲರ ಕೃತ್ಯಗಳು 5:2 (KANIRV)
Square Portrait Landscape 4K UHD
ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಪೊಸ್ತಲರ ಕೃತ್ಯಗಳು 5:3 (KANIRV)
Square Portrait Landscape 4K UHD
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?

ಅಪೊಸ್ತಲರ ಕೃತ್ಯಗಳು 5:4 (KANIRV)
Square Portrait Landscape 4K UHD
ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.

ಅಪೊಸ್ತಲರ ಕೃತ್ಯಗಳು 5:5 (KANIRV)
Square Portrait Landscape 4K UHD
ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.

ಅಪೊಸ್ತಲರ ಕೃತ್ಯಗಳು 5:6 (KANIRV)
Square Portrait Landscape 4K UHD
ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.

ಅಪೊಸ್ತಲರ ಕೃತ್ಯಗಳು 5:7 (KANIRV)
Square Portrait Landscape 4K UHD
ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.

ಅಪೊಸ್ತಲರ ಕೃತ್ಯಗಳು 5:8 (KANIRV)
Square Portrait Landscape 4K UHD
ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು.

ಅಪೊಸ್ತಲರ ಕೃತ್ಯಗಳು 5:9 (KANIRV)
Square Portrait Landscape 4K UHD
ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 5:10 (KANIRV)
Square Portrait Landscape 4K UHD
ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.

ಅಪೊಸ್ತಲರ ಕೃತ್ಯಗಳು 5:11 (KANIRV)
Square Portrait Landscape 4K UHD
ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.

ಅಪೊಸ್ತಲರ ಕೃತ್ಯಗಳು 5:12 (KANIRV)
Square Portrait Landscape 4K UHD
ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.

ಅಪೊಸ್ತಲರ ಕೃತ್ಯಗಳು 5:13 (KANIRV)
Square Portrait Landscape 4K UHD
ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.

ಅಪೊಸ್ತಲರ ಕೃತ್ಯಗಳು 5:14 (KANIRV)
Square Portrait Landscape 4K UHD
ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.

ಅಪೊಸ್ತಲರ ಕೃತ್ಯಗಳು 5:15 (KANIRV)
Square Portrait Landscape 4K UHD
ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.

ಅಪೊಸ್ತಲರ ಕೃತ್ಯಗಳು 5:16 (KANIRV)
Square Portrait Landscape 4K UHD
ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.

ಅಪೊಸ್ತಲರ ಕೃತ್ಯಗಳು 5:17 (KANIRV)
Square Portrait Landscape 4K UHD
ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,

ಅಪೊಸ್ತಲರ ಕೃತ್ಯಗಳು 5:18 (KANIRV)
Square Portrait Landscape 4K UHD
ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.

ಅಪೊಸ್ತಲರ ಕೃತ್ಯಗಳು 5:19 (KANIRV)
Square Portrait Landscape 4K UHD
ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,

ಅಪೊಸ್ತಲರ ಕೃತ್ಯಗಳು 5:20 (KANIRV)
Square Portrait Landscape 4K UHD
“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.

ಅಪೊಸ್ತಲರ ಕೃತ್ಯಗಳು 5:21 (KANIRV)
Square Portrait Landscape 4K UHD
ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.

ಅಪೊಸ್ತಲರ ಕೃತ್ಯಗಳು 5:22 (KANIRV)
Square Portrait Landscape 4K UHD
ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,

ಅಪೊಸ್ತಲರ ಕೃತ್ಯಗಳು 5:23 (KANIRV)
Square Portrait Landscape 4K UHD
“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.

ಅಪೊಸ್ತಲರ ಕೃತ್ಯಗಳು 5:24 (KANIRV)
Square Portrait Landscape 4K UHD
ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.

ಅಪೊಸ್ತಲರ ಕೃತ್ಯಗಳು 5:25 (KANIRV)
Square Portrait Landscape 4K UHD
ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.

ಅಪೊಸ್ತಲರ ಕೃತ್ಯಗಳು 5:26 (KANIRV)
Square Portrait Landscape 4K UHD
ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.

ಅಪೊಸ್ತಲರ ಕೃತ್ಯಗಳು 5:27 (KANIRV)
Square Portrait Landscape 4K UHD
ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,

ಅಪೊಸ್ತಲರ ಕೃತ್ಯಗಳು 5:28 (KANIRV)
Square Portrait Landscape 4K UHD
“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 5:29 (KANIRV)
Square Portrait Landscape 4K UHD
ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.

ಅಪೊಸ್ತಲರ ಕೃತ್ಯಗಳು 5:30 (KANIRV)
Square Portrait Landscape 4K UHD
ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.

ಅಪೊಸ್ತಲರ ಕೃತ್ಯಗಳು 5:31 (KANIRV)
Square Portrait Landscape 4K UHD
ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.

ಅಪೊಸ್ತಲರ ಕೃತ್ಯಗಳು 5:32 (KANIRV)
Square Portrait Landscape 4K UHD
ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.

ಅಪೊಸ್ತಲರ ಕೃತ್ಯಗಳು 5:33 (KANIRV)
Square Portrait Landscape 4K UHD
ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.

ಅಪೊಸ್ತಲರ ಕೃತ್ಯಗಳು 5:34 (KANIRV)
Square Portrait Landscape 4K UHD
ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.

ಅಪೊಸ್ತಲರ ಕೃತ್ಯಗಳು 5:35 (KANIRV)
Square Portrait Landscape 4K UHD
ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.

ಅಪೊಸ್ತಲರ ಕೃತ್ಯಗಳು 5:36 (KANIRV)
Square Portrait Landscape 4K UHD
ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.

ಅಪೊಸ್ತಲರ ಕೃತ್ಯಗಳು 5:37 (KANIRV)
Square Portrait Landscape 4K UHD
ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.

ಅಪೊಸ್ತಲರ ಕೃತ್ಯಗಳು 5:38 (KANIRV)
Square Portrait Landscape 4K UHD
ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;

ಅಪೊಸ್ತಲರ ಕೃತ್ಯಗಳು 5:39 (KANIRV)
Square Portrait Landscape 4K UHD
ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 5:40 (KANIRV)
Square Portrait Landscape 4K UHD
ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.

ಅಪೊಸ್ತಲರ ಕೃತ್ಯಗಳು 5:41 (KANIRV)
Square Portrait Landscape 4K UHD
ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.

ಅಪೊಸ್ತಲರ ಕೃತ್ಯಗಳು 5:42 (KANIRV)
Square Portrait Landscape 4K UHD
ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.

Available Bible Translations

American Standard Version
Acts 5 (ASV) »
King James Version
Acts 5 (KJV) »
GOD’S WORD® (GW)
Acts 5 (GW) »
Berean Bible
Acts 5 (BSB) »
World English Bible
Acts 5 (WEB) »
Louis Segond 1910
Actes 5 (LSG) »
इंडियन रिवाइज्ड वर्जन - हिंदी
प्रेरितों के काम 5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰਸੂਲਾਂ ਦੇ ਕਰਤੱਬ 5 (PANIRV) »
ভারতীয় সংশোধিত সংস্করণ - বাংলা
पশিষ্যচরিত 5 (BENIRV) »
இந்தியன் ரீவைஸ்டு வேர்ஷன் - தமிழ்
அப்போஸ்தலருடைய நடபடிகள் 5 (TAMIRV) »
इंडियन रिवाइज्ड वर्जन - मराठी
प्रेषितांचीं कृत्यें 5 (MARIRV) »
ఇండియన్ రేవిజ్డ్ వెర్షన్ - తెలుగు
అపొస్తలుల కార్యములు 5 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રેરિતોનાં ક્રત્યો 5 (GUJIRV) »
الكتاب المقدس باللغة العربية، فان دايك
أَعْمَالُ ٱلرُّسُلِ 5 (AVD) »
תנ ך עברי מודרני
מעשי השליחים 5 (HEB) »
Bíblia Sagrada Português
Atos 5 (BSL) »
Kinh Thánh: Tiếng Việt
Công Vụ Các Sứ đồ 5 (VIE) »
Reina Valera Antigua
Hechos 5 (RVA) »
La Sacra Bibbia
Atti 5 (RIV) »
圣 经 简体中文和合本
使 徒 行 传 5 (CUVS) »
聖 經 繁體中文和合本
使 徒 行 傳 5 (CUVT) »
Библия на русском
Деяния 5 (RUSV) »
Українська Біблія
Дії 5 (UKR) »
Szent Biblia - Magyar
Apostolok 5 (KAR) »
Българска Библия
Деяния 5 (BULG) »
聖書 日本語
使徒行伝 5 (JPN) »
De Heilige Schrift
Handelingen 5 (NLD) »

ಅಪೊಸ್ತಲರ ಕೃತ್ಯಗಳು (KANIRV) Chapter Selection

KANIRV Book Selection List