ದಾನಿಯೇಲನು Chapter 11 KANIRV Bible Verse Images

ದಾನಿಯೇಲನು 11 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ದಾನಿಯೇಲನು 11 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ದಾನಿಯೇಲನು 11:1 (KANIRV)
Square Portrait Landscape 4K UHD
ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು.

ದಾನಿಯೇಲನು 11:2 (KANIRV)
Square Portrait Landscape 4K UHD
ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.

ದಾನಿಯೇಲನು 11:3 (KANIRV)
Square Portrait Landscape 4K UHD
ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾ ಪ್ರಭುತ್ವದಿಂದ ಆಳುತ್ತಾ, ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.

ದಾನಿಯೇಲನು 11:4 (KANIRV)
Square Portrait Landscape 4K UHD
ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.

ದಾನಿಯೇಲನು 11:5 (KANIRV)
Square Portrait Landscape 4K UHD
ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು.

ದಾನಿಯೇಲನು 11:6 (KANIRV)
Square Portrait Landscape 4K UHD
ಕೆಲವು ವರ್ಷಗಳಾದ ಮೇಲೆ ಅವರು ಸೇರಿಕೊಳ್ಳುವರು. ದಕ್ಷಿಣ ದಿಕ್ಕಿನ ರಾಜನ ಕುಮಾರಿಯು ಉತ್ತರ ರಾಜ್ಯದ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು. ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಲು ಆಗದು; ಅವನೂ, ಅವನ ತೋಳೂ ನಿಲ್ಲವು; ಅವಳೂ, ಅವಳನ್ನು ಕರೆದು ತಂದವರೂ, ಪಡೆದವನೂ, ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.

ದಾನಿಯೇಲನು 11:7 (KANIRV)
Square Portrait Landscape 4K UHD
ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಅವರೊಡನೆ ಯುದ್ಧಮಾಡಿ, ಅವರನ್ನು ಗೆಲ್ಲುವರು.

ದಾನಿಯೇಲನು 11:8 (KANIRV)
Square Portrait Landscape 4K UHD
ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.

ದಾನಿಯೇಲನು 11:9 (KANIRV)
Square Portrait Landscape 4K UHD
ಬಳಿಕ ಉತ್ತರ ದಿಕ್ಕಿನ ರಾಜನು ದಕ್ಷಿಣ ದಿಕ್ಕಿನ ರಾಜನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗುವನು.

ದಾನಿಯೇಲನು 11:10 (KANIRV)
Square Portrait Landscape 4K UHD
ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.

ದಾನಿಯೇಲನು 11:11 (KANIRV)
Square Portrait Landscape 4K UHD
ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು.

ದಾನಿಯೇಲನು 11:12 (KANIRV)
Square Portrait Landscape 4K UHD
ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.

ದಾನಿಯೇಲನು 11:13 (KANIRV)
Square Portrait Landscape 4K UHD
ತರುವಾಯ ಉತ್ತರ ದಿಕ್ಕಿನ ರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹಳ ವರ್ಷಗಳ ನಂತರ ಮಹಾ ಸೈನ್ಯದಿಂದಲೂ, ಅಧಿಕ ಆಯುಧಗಳ ಸಮೇತವಾಗಿಯೂ ಬರುವನು.

ದಾನಿಯೇಲನು 11:14 (KANIRV)
Square Portrait Landscape 4K UHD
ಆ ಕಾಲದಲ್ಲಿ ಅನೇಕರು ದಕ್ಷಿಣ ದಿಕ್ಕಿನ ರಾಜನಿಗೆ ಎದುರು ನಿಲ್ಲುವರು. ಇದಲ್ಲದೆ ನಿನ್ನ ಜನರಲ್ಲಿ ಹಿಂಸಕರು ಕನಸನ್ನು ನಿಜ ಮಾಡಬೇಕೆಂದು ದಂಗೆ ಏಳುವರು. ಆದರೆ ಬಿದ್ದುಹೋಗುವರು.

ದಾನಿಯೇಲನು 11:15 (KANIRV)
Square Portrait Landscape 4K UHD
ಉತ್ತರ ದಿಕ್ಕಿನ ರಾಜನು ಬಂದು ದಿಬ್ಬ ಹಾಕಿ, ಕೋಟೆ ಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.

ದಾನಿಯೇಲನು 11:16 (KANIRV)
Square Portrait Landscape 4K UHD
ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.

ದಾನಿಯೇಲನು 11:17 (KANIRV)
Square Portrait Landscape 4K UHD
ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.

ದಾನಿಯೇಲನು 11:18 (KANIRV)
Square Portrait Landscape 4K UHD
ಆ ಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹಳ ದೇಶಗಳನ್ನು ಆಕ್ರಮಿಸುವನು. ಆದರೆ ಅವನು ಮಾಡುವ ನಿಂದೆಯನ್ನು ಒಬ್ಬ ಸರದಾರನು ನಿಲ್ಲಿಸಿ ಬಿಡುವುದಲ್ಲದೆ, ಅದು ಅವನ ಮೇಲೆಯೇ ತಿರುಗುವಂತೆ ಮಾಡುವನು.

ದಾನಿಯೇಲನು 11:19 (KANIRV)
Square Portrait Landscape 4K UHD
ಆ ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು.

ದಾನಿಯೇಲನು 11:20 (KANIRV)
Square Portrait Landscape 4K UHD
ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು, ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇಮಿಸುವನು. ಅವನು ಕೆಲವು ದಿನಗಳೊಳಗೆ ನಾಶವಾಗುವನು. ಅವನ ನಾಶ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.

ದಾನಿಯೇಲನು 11:21 (KANIRV)
Square Portrait Landscape 4K UHD
“ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.

ದಾನಿಯೇಲನು 11:22 (KANIRV)
Square Portrait Landscape 4K UHD
ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.

ದಾನಿಯೇಲನು 11:23 (KANIRV)
Square Portrait Landscape 4K UHD
ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸ ಮಾಡುವನು; ಸ್ವಲ್ಪ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.

ದಾನಿಯೇಲನು 11:24 (KANIRV)
Square Portrait Landscape 4K UHD
ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.

ದಾನಿಯೇಲನು 11:25 (KANIRV)
Square Portrait Landscape 4K UHD
ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.

ದಾನಿಯೇಲನು 11:26 (KANIRV)
Square Portrait Landscape 4K UHD
ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು.

ದಾನಿಯೇಲನು 11:27 (KANIRV)
Square Portrait Landscape 4K UHD
ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.

ದಾನಿಯೇಲನು 11:28 (KANIRV)
Square Portrait Landscape 4K UHD
ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.

ದಾನಿಯೇಲನು 11:29 (KANIRV)
Square Portrait Landscape 4K UHD
ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು.

ದಾನಿಯೇಲನು 11:30 (KANIRV)
Square Portrait Landscape 4K UHD
ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.

ದಾನಿಯೇಲನು 11:31 (KANIRV)
Square Portrait Landscape 4K UHD
ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.

ದಾನಿಯೇಲನು 11:32 (KANIRV)
Square Portrait Landscape 4K UHD
ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.

ದಾನಿಯೇಲನು 11:33 (KANIRV)
Square Portrait Landscape 4K UHD
ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.

ದಾನಿಯೇಲನು 11:34 (KANIRV)
Square Portrait Landscape 4K UHD
ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.

ದಾನಿಯೇಲನು 11:35 (KANIRV)
Square Portrait Landscape 4K UHD
ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.

ದಾನಿಯೇಲನು 11:36 (KANIRV)
Square Portrait Landscape 4K UHD
“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.

ದಾನಿಯೇಲನು 11:37 (KANIRV)
Square Portrait Landscape 4K UHD
ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.

ದಾನಿಯೇಲನು 11:38 (KANIRV)
Square Portrait Landscape 4K UHD
ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು.

ದಾನಿಯೇಲನು 11:39 (KANIRV)
Square Portrait Landscape 4K UHD
ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವುದು; ಬಹಳ ಜನರ ಮೇಲೆ ಆಳ್ವಿಕೆಯನ್ನು ನಡೆಸುವನು; ದೇಶವನ್ನು ಕ್ರಯಕ್ಕೆ ಹಂಚುವನು.

ದಾನಿಯೇಲನು 11:40 (KANIRV)
Square Portrait Landscape 4K UHD
“ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.

ದಾನಿಯೇಲನು 11:41 (KANIRV)
Square Portrait Landscape 4K UHD
ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.

ದಾನಿಯೇಲನು 11:42 (KANIRV)
Square Portrait Landscape 4K UHD
ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತ ದೇಶವೂ ತನ್ನನ್ನು ರಕ್ಷಿಸಿಕೊಳ್ಳದು.

ದಾನಿಯೇಲನು 11:43 (KANIRV)
Square Portrait Landscape 4K UHD
ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.

ದಾನಿಯೇಲನು 11:44 (KANIRV)
Square Portrait Landscape 4K UHD
ಹೀಗಿರಲು ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವುದು ಅವನು ಅತಿ ರೋಷಗೊಂಡು ಬಹಳ ಜನರನ್ನು ಧ್ವಂಸ ಮಾಡಿ, ನಿರ್ನಾಮ ಮಾಡುವುದಕ್ಕೆ ಹೊರಡುವನು.

ದಾನಿಯೇಲನು 11:45 (KANIRV)
Square Portrait Landscape 4K UHD
ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”

Available Bible Translations

American Standard Version (ASV)
Daniel 11 (ASV) »
King James Version (KJV)
Daniel 11 (KJV) »
GOD’S WORD® (GW)
Daniel 11 (GW) »
Berean Bible (BSB)
Daniel 11 (BSB) »
World English Bible (WEB)
Daniel 11 (WEB) »
French Bible (LSG)
Daniel 11 (LSG) »
German Bible (LUTH1912)
Daniel 11 (LUTH1912) »
Hebrew Bible (HEB)
דניאל 11 (HEB) »
Portuguese Bible (BSL)
Daniel 11 (BSL) »
Vietnamese Bible (VIE)
Ða-ni-ên 11 (VIE) »
Spanish Bible (RVA)
Daniel 11 (RVA) »
Italian Bible (RIV)
Daniele 11 (RIV) »
Chinese Simplified (CUVS)
但 以 理 书 11 (CUVS) »
Chinese Traditional (CUVT)
但 以 理 書 11 (CUVT) »
Albanian Bible (ALB)
Danieli 11 (ALB) »
Swedish Bible (SV1917)
Daniel 11 (SV1917) »
Russian Bible (RUSV)
Даниил 11 (RUSV) »
Ukrainian Bible (UKR)
Даниїл 11 (UKR) »
Hungarian Bible (KAR)
Dániel 11 (KAR) »
Bulgarian Bible (BULG)
Данаил 11 (BULG) »
Japanese Bible (JPN)
ダニエル書 11 (JPN) »
Norwegian Bible (NORSK)
Daniel 11 (NORSK) »

ದಾನಿಯೇಲನು (KANIRV) Chapter Selection

1 2 3 4 5 6 7 8 9 10 11 12

KANIRV Book Selection List