ಯೋಹಾನನು Chapter 10 KANIRV Bible Verse Images

ಯೋಹಾನನು 10 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 10 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 10:1 (KANIRV)
Square Portrait Landscape 4K UHD
“ನಿಮಗೆನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.

ಯೋಹಾನನು 10:2 (KANIRV)
Square Portrait Landscape 4K UHD
ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.

ಯೋಹಾನನು 10:3 (KANIRV)
Square Portrait Landscape 4K UHD
ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.

ಯೋಹಾನನು 10:4 (KANIRV)
Square Portrait Landscape 4K UHD
ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.

ಯೋಹಾನನು 10:5 (KANIRV)
Square Portrait Landscape 4K UHD
ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ.

ಯೋಹಾನನು 10:6 (KANIRV)
Square Portrait Landscape 4K UHD
ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ.

ಯೋಹಾನನು 10:7 (KANIRV)
Square Portrait Landscape 4K UHD
ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,

ಯೋಹಾನನು 10:8 (KANIRV)
Square Portrait Landscape 4K UHD
ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.

ಯೋಹಾನನು 10:9 (KANIRV)
Square Portrait Landscape 4K UHD
ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.

ಯೋಹಾನನು 10:10 (KANIRV)
Square Portrait Landscape 4K UHD
ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.

ಯೋಹಾನನು 10:11 (KANIRV)
Square Portrait Landscape 4K UHD
“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

ಯೋಹಾನನು 10:12 (KANIRV)
Square Portrait Landscape 4K UHD
ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.

ಯೋಹಾನನು 10:13 (KANIRV)
Square Portrait Landscape 4K UHD
ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.

ಯೋಹಾನನು 10:14 (KANIRV)
Square Portrait Landscape 4K UHD
ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.

ಯೋಹಾನನು 10:15 (KANIRV)
Square Portrait Landscape 4K UHD
ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.

ಯೋಹಾನನು 10:16 (KANIRV)
Square Portrait Landscape 4K UHD
ಇದಲ್ಲದೆಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

ಯೋಹಾನನು 10:17 (KANIRV)
Square Portrait Landscape 4K UHD
ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ.

ಯೋಹಾನನು 10:18 (KANIRV)
Square Portrait Landscape 4K UHD
ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.

ಯೋಹಾನನು 10:19 (KANIRV)
Square Portrait Landscape 4K UHD
ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು.

ಯೋಹಾನನು 10:20 (KANIRV)
Square Portrait Landscape 4K UHD
ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.

ಯೋಹಾನನು 10:21 (KANIRV)
Square Portrait Landscape 4K UHD
ಇನ್ನು ಕೆಲವರು, “ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.

ಯೋಹಾನನು 10:22 (KANIRV)
Square Portrait Landscape 4K UHD
ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು.

ಯೋಹಾನನು 10:23 (KANIRV)
Square Portrait Landscape 4K UHD
ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ,

ಯೋಹಾನನು 10:24 (KANIRV)
Square Portrait Landscape 4K UHD
ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.

ಯೋಹಾನನು 10:25 (KANIRV)
Square Portrait Landscape 4K UHD
ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.

ಯೋಹಾನನು 10:26 (KANIRV)
Square Portrait Landscape 4K UHD
ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ.

ಯೋಹಾನನು 10:27 (KANIRV)
Square Portrait Landscape 4K UHD
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.

ಯೋಹಾನನು 10:28 (KANIRV)
Square Portrait Landscape 4K UHD
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.

ಯೋಹಾನನು 10:29 (KANIRV)
Square Portrait Landscape 4K UHD
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು.ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.

ಯೋಹಾನನು 10:30 (KANIRV)
Square Portrait Landscape 4K UHD
ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.

ಯೋಹಾನನು 10:31 (KANIRV)
Square Portrait Landscape 4K UHD
ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,

ಯೋಹಾನನು 10:32 (KANIRV)
Square Portrait Landscape 4K UHD
ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,

ಯೋಹಾನನು 10:33 (KANIRV)
Square Portrait Landscape 4K UHD
ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.

ಯೋಹಾನನು 10:34 (KANIRV)
Square Portrait Landscape 4K UHD
ಅದಕ್ಕೆ ಯೇಸು, “‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?

ಯೋಹಾನನು 10:35 (KANIRV)
Square Portrait Landscape 4K UHD
ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ

ಯೋಹಾನನು 10:36 (KANIRV)
Square Portrait Landscape 4K UHD
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’

ಯೋಹಾನನು 10:37 (KANIRV)
Square Portrait Landscape 4K UHD
ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ

ಯೋಹಾನನು 10:38 (KANIRV)
Square Portrait Landscape 4K UHD
ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.

ಯೋಹಾನನು 10:39 (KANIRV)
Square Portrait Landscape 4K UHD
ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.

ಯೋಹಾನನು 10:40 (KANIRV)
Square Portrait Landscape 4K UHD
ಆ ಮೇಲೆ ಆತನು ಯೊರ್ದನ್ ಹೊಳೆಯನ್ನು ದಾಟಿ, ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು.

ಯೋಹಾನನು 10:41 (KANIRV)
Square Portrait Landscape 4K UHD
ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು.

ಯೋಹಾನನು 10:42 (KANIRV)
Square Portrait Landscape 4K UHD
ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.

Available Bible Translations

American Standard Version
John 10 (ASV) »
King James Version
John 10 (KJV) »
GOD’S WORD® (GW)
John 10 (GW) »
Berean Bible
John 10 (BSB) »
World English Bible
John 10 (WEB) »
Louis Segond 1910
Jean 10 (LSG) »
इंडियन रिवाइज्ड वर्जन - हिंदी
यूहन्ना 10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 10 (PANIRV) »
ভারতীয় সংশোধিত সংস্করণ - বাংলা
যোহন 10 (BENIRV) »
இந்தியன் ரீவைஸ்டு வேர்ஷன் - தமிழ்
யோவான் 10 (TAMIRV) »
इंडियन रिवाइज्ड वर्जन - मराठी
योहान 10 (MARIRV) »
ఇండియన్ రేవిజ్డ్ వెర్షన్ - తెలుగు
యోహాను 10 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 10 (GUJIRV) »
الكتاب المقدس باللغة العربية، فان دايك
يوحنَّا 10 (AVD) »
Bíblia Sagrada Português
João 10 (BSL) »
Kinh Thánh: Tiếng Việt
Giăng 10 (VIE) »
Reina Valera Antigua
Juan 10 (RVA) »
La Sacra Bibbia
Giovanni 10 (RIV) »
圣 经 简体中文和合本
约 翰 福 音 10 (CUVS) »
聖 經 繁體中文和合本
約 翰 福 音 10 (CUVT) »
Bibla e Shenjtë
Gjoni 10 (ALB) »
Svenska Bibeln 1917
Johannes 10 (SV1917) »
Библия на русском
Иоанна 10 (RUSV) »
Українська Біблія
Івана 10 (UKR) »
Szent Biblia - Magyar
János 10 (KAR) »
Българска Библия
Йоан 10 (BULG) »
Biblia Takatifu
Yohana 10 (SWHULB) »
Kitaabka Quduuska Ah
Yooxanaa 10 (SOM) »
De Heilige Schrift
Johannes 10 (NLD) »
Dansk Bibel 1871
Johannes 10 (DA1871) »

ಯೋಹಾನನು (KANIRV) Chapter Selection

KANIRV Book Selection List