ಯೋಹಾನನು Chapter 20 KANIRV Bible Verse Images

ಯೋಹಾನನು 20 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 20 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 20:1 (KANIRV)
Square Portrait Landscape 4K UHD
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.

ಯೋಹಾನನು 20:2 (KANIRV)
Square Portrait Landscape 4K UHD
ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು

ಯೋಹಾನನು 20:3 (KANIRV)
Square Portrait Landscape 4K UHD
ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು.

ಯೋಹಾನನು 20:4 (KANIRV)
Square Portrait Landscape 4K UHD
ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.

ಯೋಹಾನನು 20:5 (KANIRV)
Square Portrait Landscape 4K UHD
ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.

ಯೋಹಾನನು 20:6 (KANIRV)
Square Portrait Landscape 4K UHD
ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ

ಯೋಹಾನನು 20:7 (KANIRV)
Square Portrait Landscape 4K UHD
ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.

ಯೋಹಾನನು 20:8 (KANIRV)
Square Portrait Landscape 4K UHD
ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.

ಯೋಹಾನನು 20:9 (KANIRV)
Square Portrait Landscape 4K UHD
ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.

ಯೋಹಾನನು 20:10 (KANIRV)
Square Portrait Landscape 4K UHD
ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.

ಯೋಹಾನನು 20:11 (KANIRV)
Square Portrait Landscape 4K UHD
ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,

ಯೋಹಾನನು 20:12 (KANIRV)
Square Portrait Landscape 4K UHD
ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.

ಯೋಹಾನನು 20:13 (KANIRV)
Square Portrait Landscape 4K UHD
ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.

ಯೋಹಾನನು 20:14 (KANIRV)
Square Portrait Landscape 4K UHD
ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.

ಯೋಹಾನನು 20:15 (KANIRV)
Square Portrait Landscape 4K UHD
ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.

ಯೋಹಾನನು 20:16 (KANIRV)
Square Portrait Landscape 4K UHD
ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.

ಯೋಹಾನನು 20:17 (KANIRV)
Square Portrait Landscape 4K UHD
ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.

ಯೋಹಾನನು 20:18 (KANIRV)
Square Portrait Landscape 4K UHD
ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.

ಯೋಹಾನನು 20:19 (KANIRV)
Square Portrait Landscape 4K UHD
ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆಸಮಾಧಾನವಾಗಲಿ” ಎಂದನು.

ಯೋಹಾನನು 20:20 (KANIRV)
Square Portrait Landscape 4K UHD
ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.

ಯೋಹಾನನು 20:21 (KANIRV)
Square Portrait Landscape 4K UHD
ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.

ಯೋಹಾನನು 20:22 (KANIRV)
Square Portrait Landscape 4K UHD
ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.

ಯೋಹಾನನು 20:23 (KANIRV)
Square Portrait Landscape 4K UHD
ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.

ಯೋಹಾನನು 20:24 (KANIRV)
Square Portrait Landscape 4K UHD
ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ.

ಯೋಹಾನನು 20:25 (KANIRV)
Square Portrait Landscape 4K UHD
ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.

ಯೋಹಾನನು 20:26 (KANIRV)
Square Portrait Landscape 4K UHD
ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”

ಯೋಹಾನನು 20:27 (KANIRV)
Square Portrait Landscape 4K UHD
ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.

ಯೋಹಾನನು 20:28 (KANIRV)
Square Portrait Landscape 4K UHD
ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.

ಯೋಹಾನನು 20:29 (KANIRV)
Square Portrait Landscape 4K UHD
ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ,ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.

ಯೋಹಾನನು 20:30 (KANIRV)
Square Portrait Landscape 4K UHD
ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ.

ಯೋಹಾನನು 20:31 (KANIRV)
Square Portrait Landscape 4K UHD
ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

Available Bible Translations

American Standard Version
John 20 (ASV) »
King James Version
John 20 (KJV) »
GOD’S WORD® (GW)
John 20 (GW) »
Berean Bible
John 20 (BSB) »
World English Bible
John 20 (WEB) »
Louis Segond 1910
Jean 20 (LSG) »
इंडियन रिवाइज्ड वर्जन - हिंदी
यूहन्ना 20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 20 (PANIRV) »
ভারতীয় সংশোধিত সংস্করণ - বাংলা
যোহন 20 (BENIRV) »
இந்தியன் ரீவைஸ்டு வேர்ஷன் - தமிழ்
யோவான் 20 (TAMIRV) »
इंडियन रिवाइज्ड वर्जन - मराठी
योहान 20 (MARIRV) »
ఇండియన్ రేవిజ్డ్ వెర్షన్ - తెలుగు
యోహాను 20 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 20 (GUJIRV) »
الكتاب المقدس باللغة العربية، فان دايك
يوحنَّا 20 (AVD) »
Bíblia Sagrada Português
João 20 (BSL) »
Kinh Thánh: Tiếng Việt
Giăng 20 (VIE) »
Reina Valera Antigua
Juan 20 (RVA) »
La Sacra Bibbia
Giovanni 20 (RIV) »
圣 经 简体中文和合本
约 翰 福 音 20 (CUVS) »
聖 經 繁體中文和合本
約 翰 福 音 20 (CUVT) »
Bibla e Shenjtë
Gjoni 20 (ALB) »
Svenska Bibeln 1917
Johannes 20 (SV1917) »
Библия на русском
Иоанна 20 (RUSV) »
Українська Біблія
Івана 20 (UKR) »
Szent Biblia - Magyar
János 20 (KAR) »
Българска Библия
Йоан 20 (BULG) »
Biblia Takatifu
Yohana 20 (SWHULB) »
Kitaabka Quduuska Ah
Yooxanaa 20 (SOM) »
De Heilige Schrift
Johannes 20 (NLD) »
Dansk Bibel 1871
Johannes 20 (DA1871) »

ಯೋಹಾನನು (KANIRV) Chapter Selection

KANIRV Book Selection List