ಯಾಜಕಕಾಂಡ Chapter 16 KANIRV Bible Verse Images

ಯಾಜಕಕಾಂಡ 16 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯಾಜಕಕಾಂಡ 16 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯಾಜಕಕಾಂಡ 16:1 (KANIRV)
Square Portrait Landscape 4K UHD
ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ,

ಯಾಜಕಕಾಂಡ 16:2 (KANIRV)
Square Portrait Landscape 4K UHD
“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.

ಯಾಜಕಕಾಂಡ 16:3 (KANIRV)
Square Portrait Landscape 4K UHD
ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.

ಯಾಜಕಕಾಂಡ 16:4 (KANIRV)
Square Portrait Landscape 4K UHD
ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.

ಯಾಜಕಕಾಂಡ 16:5 (KANIRV)
Square Portrait Landscape 4K UHD
ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.

ಯಾಜಕಕಾಂಡ 16:6 (KANIRV)
Square Portrait Landscape 4K UHD
ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.

ಯಾಜಕಕಾಂಡ 16:7 (KANIRV)
Square Portrait Landscape 4K UHD
ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.

ಯಾಜಕಕಾಂಡ 16:8 (KANIRV)
Square Portrait Landscape 4K UHD
ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.

ಯಾಜಕಕಾಂಡ 16:9 (KANIRV)
Square Portrait Landscape 4K UHD
ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.

ಯಾಜಕಕಾಂಡ 16:10 (KANIRV)
Square Portrait Landscape 4K UHD
ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.

ಯಾಜಕಕಾಂಡ 16:11 (KANIRV)
Square Portrait Landscape 4K UHD
“ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.

ಯಾಜಕಕಾಂಡ 16:12 (KANIRV)
Square Portrait Landscape 4K UHD
ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.

ಯಾಜಕಕಾಂಡ 16:13 (KANIRV)
Square Portrait Landscape 4K UHD
ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.

ಯಾಜಕಕಾಂಡ 16:14 (KANIRV)
Square Portrait Landscape 4K UHD
ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.

ಯಾಜಕಕಾಂಡ 16:15 (KANIRV)
Square Portrait Landscape 4K UHD
“ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.

ಯಾಜಕಕಾಂಡ 16:16 (KANIRV)
Square Portrait Landscape 4K UHD
ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.

ಯಾಜಕಕಾಂಡ 16:17 (KANIRV)
Square Portrait Landscape 4K UHD
ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.

ಯಾಜಕಕಾಂಡ 16:18 (KANIRV)
Square Portrait Landscape 4K UHD
ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.

ಯಾಜಕಕಾಂಡ 16:19 (KANIRV)
Square Portrait Landscape 4K UHD
ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.

ಯಾಜಕಕಾಂಡ 16:20 (KANIRV)
Square Portrait Landscape 4K UHD
“ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.

ಯಾಜಕಕಾಂಡ 16:21 (KANIRV)
Square Portrait Landscape 4K UHD
ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.

ಯಾಜಕಕಾಂಡ 16:22 (KANIRV)
Square Portrait Landscape 4K UHD
ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.

ಯಾಜಕಕಾಂಡ 16:23 (KANIRV)
Square Portrait Landscape 4K UHD
“ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.

ಯಾಜಕಕಾಂಡ 16:24 (KANIRV)
Square Portrait Landscape 4K UHD
ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.

ಯಾಜಕಕಾಂಡ 16:25 (KANIRV)
Square Portrait Landscape 4K UHD
ಅವನು ದೋಷಪರಿಹಾರಕ ಯಜ್ಞಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.

ಯಾಜಕಕಾಂಡ 16:26 (KANIRV)
Square Portrait Landscape 4K UHD
“ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.

ಯಾಜಕಕಾಂಡ 16:27 (KANIRV)
Square Portrait Landscape 4K UHD
ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.

ಯಾಜಕಕಾಂಡ 16:28 (KANIRV)
Square Portrait Landscape 4K UHD
ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.

ಯಾಜಕಕಾಂಡ 16:29 (KANIRV)
Square Portrait Landscape 4K UHD
“ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.

ಯಾಜಕಕಾಂಡ 16:30 (KANIRV)
Square Portrait Landscape 4K UHD
ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.

ಯಾಜಕಕಾಂಡ 16:31 (KANIRV)
Square Portrait Landscape 4K UHD
ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ.

ಯಾಜಕಕಾಂಡ 16:32 (KANIRV)
Square Portrait Landscape 4K UHD
“ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.

ಯಾಜಕಕಾಂಡ 16:33 (KANIRV)
Square Portrait Landscape 4K UHD
ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

ಯಾಜಕಕಾಂಡ 16:34 (KANIRV)
Square Portrait Landscape 4K UHD
ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.

Available Bible Translations

American Standard Version (ASV)
Leviticus 16 (ASV) »
King James Version (KJV)
Leviticus 16 (KJV) »
GOD’S WORD® (GW)
Leviticus 16 (GW) »
Berean Bible (BSB)
Leviticus 16 (BSB) »
World English Bible (WEB)
Leviticus 16 (WEB) »
French Bible (LSG)
Lévitique 16 (LSG) »
German Bible (LUTH1912)
Levitikus 16 (LUTH1912) »
Punjabi Bible (PANIRV)
ਅਹਬਾਰ 16 (PANIRV) »
Marathi Bible (MARIRV)
लेवीय 16 (MARIRV) »
Gujarati Bible (GUJIRV)
લેવીય 16 (GUJIRV) »
Hebrew Bible (HEB)
ויקרא 16 (HEB) »
Portuguese Bible (BSL)
Levítico 16 (BSL) »
Vietnamese Bible (VIE)
Lê-vi 16 (VIE) »
Spanish Bible (RVA)
Levítico 16 (RVA) »
Italian Bible (RIV)
Levitico 16 (RIV) »
Chinese Simplified (CUVS)
利 未 记 16 (CUVS) »
Chinese Traditional (CUVT)
利 未 記 16 (CUVT) »
Albanian Bible (ALB)
Levitiku 16 (ALB) »
Swedish Bible (SV1917)
3 Mosebok 16 (SV1917) »
Russian Bible (RUSV)
Левит 16 (RUSV) »
Ukrainian Bible (UKR)
Левит 16 (UKR) »
Hungarian Bible (KAR)
3 Mózes 16 (KAR) »
Bulgarian Bible (BULG)
Левит 16 (BULG) »
Japanese Bible (JPN)
レビ記 16 (JPN) »
Norwegian Bible (NORSK)
3 Mosebok 16 (NORSK) »

ಯಾಜಕಕಾಂಡ (KANIRV) Chapter Selection

KANIRV Book Selection List