ಮತ್ತಾಯನು Chapter 21 KANIRV Bible Verse Images

ಮತ್ತಾಯನು 21 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 21 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 21:1 (KANIRV)
Square Portrait Landscape 4K UHD
ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ

ಮತ್ತಾಯನು 21:2 (KANIRV)
Square Portrait Landscape 4K UHD
ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.

ಮತ್ತಾಯನು 21:3 (KANIRV)
Square Portrait Landscape 4K UHD
ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ‘ಇವು ನಮ್ಮ ಕರ್ತನಿಗೆ ಬೇಕಾಗಿವೆ’ ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು” ಎಂದು ಹೇಳಿ ಕಳುಹಿಸಿದನು.

ಮತ್ತಾಯನು 21:4 (KANIRV)
Square Portrait Landscape 4K UHD
ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ,

ಮತ್ತಾಯನು 21:5 (KANIRV)
Square Portrait Landscape 4K UHD
“ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.

ಮತ್ತಾಯನು 21:6 (KANIRV)
Square Portrait Landscape 4K UHD
ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.

ಮತ್ತಾಯನು 21:7 (KANIRV)
Square Portrait Landscape 4K UHD
ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು.

ಮತ್ತಾಯನು 21:8 (KANIRV)
Square Portrait Landscape 4K UHD
ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.

ಮತ್ತಾಯನು 21:9 (KANIRV)
Square Portrait Landscape 4K UHD
ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.

ಮತ್ತಾಯನು 21:10 (KANIRV)
Square Portrait Landscape 4K UHD
ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.

ಮತ್ತಾಯನು 21:11 (KANIRV)
Square Portrait Landscape 4K UHD
ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.

ಮತ್ತಾಯನು 21:12 (KANIRV)
Square Portrait Landscape 4K UHD
ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.

ಮತ್ತಾಯನು 21:13 (KANIRV)
Square Portrait Landscape 4K UHD
ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.

ಮತ್ತಾಯನು 21:14 (KANIRV)
Square Portrait Landscape 4K UHD
ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.

ಮತ್ತಾಯನು 21:15 (KANIRV)
Square Portrait Landscape 4K UHD
ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.

ಮತ್ತಾಯನು 21:16 (KANIRV)
Square Portrait Landscape 4K UHD
ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.

ಮತ್ತಾಯನು 21:17 (KANIRV)
Square Portrait Landscape 4K UHD
ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.

ಮತ್ತಾಯನು 21:18 (KANIRV)
Square Portrait Landscape 4K UHD
ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು.

ಮತ್ತಾಯನು 21:19 (KANIRV)
Square Portrait Landscape 4K UHD
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.

ಮತ್ತಾಯನು 21:20 (KANIRV)
Square Portrait Landscape 4K UHD
ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.

ಮತ್ತಾಯನು 21:21 (KANIRV)
Square Portrait Landscape 4K UHD
ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.

ಮತ್ತಾಯನು 21:22 (KANIRV)
Square Portrait Landscape 4K UHD
ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.

ಮತ್ತಾಯನು 21:23 (KANIRV)
Square Portrait Landscape 4K UHD
ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.

ಮತ್ತಾಯನು 21:24 (KANIRV)
Square Portrait Landscape 4K UHD
ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.

ಮತ್ತಾಯನು 21:25 (KANIRV)
Square Portrait Landscape 4K UHD
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;

ಮತ್ತಾಯನು 21:26 (KANIRV)
Square Portrait Landscape 4K UHD
‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಮತ್ತಾಯನು 21:27 (KANIRV)
Square Portrait Landscape 4K UHD
ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.

ಮತ್ತಾಯನು 21:28 (KANIRV)
Square Portrait Landscape 4K UHD
ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು

ಮತ್ತಾಯನು 21:29 (KANIRV)
Square Portrait Landscape 4K UHD
ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.

ಮತ್ತಾಯನು 21:30 (KANIRV)
Square Portrait Landscape 4K UHD
ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.

ಮತ್ತಾಯನು 21:31 (KANIRV)
Square Portrait Landscape 4K UHD
ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಮತ್ತಾಯನು 21:32 (KANIRV)
Square Portrait Landscape 4K UHD
ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.

ಮತ್ತಾಯನು 21:33 (KANIRV)
Square Portrait Landscape 4K UHD
“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನುಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನುಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.

ಮತ್ತಾಯನು 21:34 (KANIRV)
Square Portrait Landscape 4K UHD
ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,

ಮತ್ತಾಯನು 21:35 (KANIRV)
Square Portrait Landscape 4K UHD
ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.

ಮತ್ತಾಯನು 21:36 (KANIRV)
Square Portrait Landscape 4K UHD
ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.

ಮತ್ತಾಯನು 21:37 (KANIRV)
Square Portrait Landscape 4K UHD
ಕಡೆಯಲ್ಲಿ ‘ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.

ಮತ್ತಾಯನು 21:38 (KANIRV)
Square Portrait Landscape 4K UHD
ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು

ಮತ್ತಾಯನು 21:39 (KANIRV)
Square Portrait Landscape 4K UHD
ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.

ಮತ್ತಾಯನು 21:40 (KANIRV)
Square Portrait Landscape 4K UHD
ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?” ಅಂದನು.

ಮತ್ತಾಯನು 21:41 (KANIRV)
Square Portrait Landscape 4K UHD
ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.

ಮತ್ತಾಯನು 21:42 (KANIRV)
Square Portrait Landscape 4K UHD
ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’

ಮತ್ತಾಯನು 21:43 (KANIRV)
Square Portrait Landscape 4K UHD
ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.

ಮತ್ತಾಯನು 21:44 (KANIRV)
Square Portrait Landscape 4K UHD
ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.

ಮತ್ತಾಯನು 21:45 (KANIRV)
Square Portrait Landscape 4K UHD
ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;

ಮತ್ತಾಯನು 21:46 (KANIRV)
Square Portrait Landscape 4K UHD
ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.

Available Bible Translations

American Standard Version
Matthew 21 (ASV) »
King James Version
Matthew 21 (KJV) »
GOD’S WORD® (GW)
Matthew 21 (GW) »
World English Bible
Matthew 21 (WEB) »
Louis Segond 1910
Matthieu 21 (LSG) »
इंडियन रिवाइज्ड वर्जन - हिंदी
मत्ती 21 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 21 (PANIRV) »
ভারতীয় সংশোধিত সংস্করণ - বাংলা
মথি 21 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 21 (TAMIRV) »
इंडियन रिवाइज्ड वर्जन - मराठी
मत्तय 21 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 21 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 21 (GUJIRV) »
الكتاب المقدس باللغة العربية، فان دايك
مَتَّى 21 (AVD) »
תנ ך עברי מודרני
הבשורה על־פי מתי 21 (HEB) »
Bíblia Sagrada Português
Mateus 21 (BSL) »
Kinh Thánh: Tiếng Việt
Ma-thi-ơ 21 (VIE) »
Reina Valera Antigua
Mateo 21 (RVA) »
La Sacra Bibbia
Matteo 21 (RIV) »
圣 经 简体中文和合本
马 太 福 音 21 (CUVS) »
聖 經 繁體中文和合本
馬 太 福 音 21 (CUVT) »
Bibla e Shenjtë
Mateu 21 (ALB) »
Svenska Bibeln 1917
Matteus 21 (SV1917) »
Библия на русском
Матфея 21 (RUSV) »
Українська Біблія
Матвія 21 (UKR) »
Szent Biblia - Magyar
Máté 21 (KAR) »
Българска Библия
Матей 21 (BULG) »
Det Norsk Bibel
Matteus 21 (NORSK) »
Kitaabka Quduuska Ah
Matayos 21 (SOM) »
De Heilige Schrift
Mattheüs 21 (NLD) »

ಮತ್ತಾಯನು (KANIRV) Chapter Selection

KANIRV Book Selection List