ಮತ್ತಾಯನು Chapter 7 KANIRV Bible Verse Images

ಮತ್ತಾಯನು 7 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಮತ್ತಾಯನು 7 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಮತ್ತಾಯನು 7:1 (KANIRV)
Square Portrait Landscape 4K UHD
“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.

ಮತ್ತಾಯನು 7:2 (KANIRV)
Square Portrait Landscape 4K UHD
ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.

ಮತ್ತಾಯನು 7:3 (KANIRV)
Square Portrait Landscape 4K UHD
“ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?

ಮತ್ತಾಯನು 7:4 (KANIRV)
Square Portrait Landscape 4K UHD
ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.

ಮತ್ತಾಯನು 7:5 (KANIRV)
Square Portrait Landscape 4K UHD
ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.

ಮತ್ತಾಯನು 7:6 (KANIRV)
Square Portrait Landscape 4K UHD
“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

ಮತ್ತಾಯನು 7:7 (KANIRV)
Square Portrait Landscape 4K UHD
“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;

ಮತ್ತಾಯನು 7:8 (KANIRV)
Square Portrait Landscape 4K UHD
ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.

ಮತ್ತಾಯನು 7:9 (KANIRV)
Square Portrait Landscape 4K UHD
“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?

ಮತ್ತಾಯನು 7:10 (KANIRV)
Square Portrait Landscape 4K UHD
ಮೀನು ಕೇಳಿದರೆ ಹಾವನ್ನು ಕೊಡುವನೋ?

ಮತ್ತಾಯನು 7:11 (KANIRV)
Square Portrait Landscape 4K UHD
ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?

ಮತ್ತಾಯನು 7:12 (KANIRV)
Square Portrait Landscape 4K UHD
ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.

ಮತ್ತಾಯನು 7:13 (KANIRV)
Square Portrait Landscape 4K UHD
“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.

ಮತ್ತಾಯನು 7:14 (KANIRV)
Square Portrait Landscape 4K UHD
ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.

ಮತ್ತಾಯನು 7:15 (KANIRV)
Square Portrait Landscape 4K UHD
“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.

ಮತ್ತಾಯನು 7:16 (KANIRV)
Square Portrait Landscape 4K UHD
ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?

ಮತ್ತಾಯನು 7:17 (KANIRV)
Square Portrait Landscape 4K UHD
ಹಾಗೆಯೇಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;

ಮತ್ತಾಯನು 7:18 (KANIRV)
Square Portrait Landscape 4K UHD
ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.

ಮತ್ತಾಯನು 7:19 (KANIRV)
Square Portrait Landscape 4K UHD
ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.

ಮತ್ತಾಯನು 7:20 (KANIRV)
Square Portrait Landscape 4K UHD
ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.

ಮತ್ತಾಯನು 7:21 (KANIRV)
Square Portrait Landscape 4K UHD
“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.

ಮತ್ತಾಯನು 7:22 (KANIRV)
Square Portrait Landscape 4K UHD
ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.

ಮತ್ತಾಯನು 7:23 (KANIRV)
Square Portrait Landscape 4K UHD
ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.

ಮತ್ತಾಯನು 7:24 (KANIRV)
Square Portrait Landscape 4K UHD
“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.

ಮತ್ತಾಯನು 7:25 (KANIRV)
Square Portrait Landscape 4K UHD
ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.

ಮತ್ತಾಯನು 7:26 (KANIRV)
Square Portrait Landscape 4K UHD
ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.

ಮತ್ತಾಯನು 7:27 (KANIRV)
Square Portrait Landscape 4K UHD
ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.

ಮತ್ತಾಯನು 7:28 (KANIRV)
Square Portrait Landscape 4K UHD
“ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

ಮತ್ತಾಯನು 7:29 (KANIRV)
Square Portrait Landscape 4K UHD
ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

Available Bible Translations

American Standard Version
Matthew 7 (ASV) »
King James Version
Matthew 7 (KJV) »
GOD’S WORD® (GW)
Matthew 7 (GW) »
World English Bible
Matthew 7 (WEB) »
Louis Segond 1910
Matthieu 7 (LSG) »
इंडियन रिवाइज्ड वर्जन - हिंदी
मत्ती 7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 7 (PANIRV) »
ভারতীয় সংশোধিত সংস্করণ - বাংলা
মথি 7 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 7 (TAMIRV) »
इंडियन रिवाइज्ड वर्जन - मराठी
मत्तय 7 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 7 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 7 (GUJIRV) »
الكتاب المقدس باللغة العربية، فان دايك
مَتَّى 7 (AVD) »
תנ ך עברי מודרני
הבשורה על־פי מתי 7 (HEB) »
Bíblia Sagrada Português
Mateus 7 (BSL) »
Kinh Thánh: Tiếng Việt
Ma-thi-ơ 7 (VIE) »
Reina Valera Antigua
Mateo 7 (RVA) »
La Sacra Bibbia
Matteo 7 (RIV) »
圣 经 简体中文和合本
马 太 福 音 7 (CUVS) »
聖 經 繁體中文和合本
馬 太 福 音 7 (CUVT) »
Bibla e Shenjtë
Mateu 7 (ALB) »
Svenska Bibeln 1917
Matteus 7 (SV1917) »
Библия на русском
Матфея 7 (RUSV) »
Українська Біблія
Матвія 7 (UKR) »
Szent Biblia - Magyar
Máté 7 (KAR) »
Българска Библия
Матей 7 (BULG) »
Det Norsk Bibel
Matteus 7 (NORSK) »
Biblia Takatifu
Mathayo 7 (SWHULB) »
Kitaabka Quduuska Ah
Matayos 7 (SOM) »
De Heilige Schrift
Mattheüs 7 (NLD) »
Dansk Bibel 1871
Matthæus 7 (DA1871) »

ಮತ್ತಾಯನು (KANIRV) Chapter Selection

KANIRV Book Selection List