ಅರಣ್ಯಕಾಂಡ Chapter 10 KANIRV Bible Verse Images

ಅರಣ್ಯಕಾಂಡ 10 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅರಣ್ಯಕಾಂಡ 10 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅರಣ್ಯಕಾಂಡ 10:1 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,

ಅರಣ್ಯಕಾಂಡ 10:2 (KANIRV)
Square Portrait Landscape 4K UHD
“ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.

ಅರಣ್ಯಕಾಂಡ 10:3 (KANIRV)
Square Portrait Landscape 4K UHD
ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.

ಅರಣ್ಯಕಾಂಡ 10:4 (KANIRV)
Square Portrait Landscape 4K UHD
ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.

ಅರಣ್ಯಕಾಂಡ 10:5 (KANIRV)
Square Portrait Landscape 4K UHD
ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.

ಅರಣ್ಯಕಾಂಡ 10:6 (KANIRV)
Square Portrait Landscape 4K UHD
ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.

ಅರಣ್ಯಕಾಂಡ 10:7 (KANIRV)
Square Portrait Landscape 4K UHD
ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.

ಅರಣ್ಯಕಾಂಡ 10:8 (KANIRV)
Square Portrait Landscape 4K UHD
“ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.

ಅರಣ್ಯಕಾಂಡ 10:9 (KANIRV)
Square Portrait Landscape 4K UHD
ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.

ಅರಣ್ಯಕಾಂಡ 10:10 (KANIRV)
Square Portrait Landscape 4K UHD
ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”

ಅರಣ್ಯಕಾಂಡ 10:11 (KANIRV)
Square Portrait Landscape 4K UHD
ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.

ಅರಣ್ಯಕಾಂಡ 10:12 (KANIRV)
Square Portrait Landscape 4K UHD
ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.

ಅರಣ್ಯಕಾಂಡ 10:13 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.

ಅರಣ್ಯಕಾಂಡ 10:14 (KANIRV)
Square Portrait Landscape 4K UHD
ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.

ಅರಣ್ಯಕಾಂಡ 10:15 (KANIRV)
Square Portrait Landscape 4K UHD
ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.

ಅರಣ್ಯಕಾಂಡ 10:16 (KANIRV)
Square Portrait Landscape 4K UHD
ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.

ಅರಣ್ಯಕಾಂಡ 10:17 (KANIRV)
Square Portrait Landscape 4K UHD
ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.

ಅರಣ್ಯಕಾಂಡ 10:18 (KANIRV)
Square Portrait Landscape 4K UHD
ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.

ಅರಣ್ಯಕಾಂಡ 10:19 (KANIRV)
Square Portrait Landscape 4K UHD
ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.

ಅರಣ್ಯಕಾಂಡ 10:20 (KANIRV)
Square Portrait Landscape 4K UHD
ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.

ಅರಣ್ಯಕಾಂಡ 10:21 (KANIRV)
Square Portrait Landscape 4K UHD
ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅರಣ್ಯಕಾಂಡ 10:22 (KANIRV)
Square Portrait Landscape 4K UHD
ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.

ಅರಣ್ಯಕಾಂಡ 10:23 (KANIRV)
Square Portrait Landscape 4K UHD
ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.

ಅರಣ್ಯಕಾಂಡ 10:24 (KANIRV)
Square Portrait Landscape 4K UHD
ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.

ಅರಣ್ಯಕಾಂಡ 10:25 (KANIRV)
Square Portrait Landscape 4K UHD
ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.

ಅರಣ್ಯಕಾಂಡ 10:26 (KANIRV)
Square Portrait Landscape 4K UHD
ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.

ಅರಣ್ಯಕಾಂಡ 10:27 (KANIRV)
Square Portrait Landscape 4K UHD
ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.

ಅರಣ್ಯಕಾಂಡ 10:28 (KANIRV)
Square Portrait Landscape 4K UHD
ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.

ಅರಣ್ಯಕಾಂಡ 10:29 (KANIRV)
Square Portrait Landscape 4K UHD
ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.

ಅರಣ್ಯಕಾಂಡ 10:30 (KANIRV)
Square Portrait Landscape 4K UHD
ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.

ಅರಣ್ಯಕಾಂಡ 10:31 (KANIRV)
Square Portrait Landscape 4K UHD
ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.

ಅರಣ್ಯಕಾಂಡ 10:32 (KANIRV)
Square Portrait Landscape 4K UHD
ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.

ಅರಣ್ಯಕಾಂಡ 10:33 (KANIRV)
Square Portrait Landscape 4K UHD
ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.

ಅರಣ್ಯಕಾಂಡ 10:34 (KANIRV)
Square Portrait Landscape 4K UHD
ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.

ಅರಣ್ಯಕಾಂಡ 10:35 (KANIRV)
Square Portrait Landscape 4K UHD
ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.

ಅರಣ್ಯಕಾಂಡ 10:36 (KANIRV)
Square Portrait Landscape 4K UHD
ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.

Available Bible Translations

American Standard Version
Numbers 10 (ASV) »
King James Version
Numbers 10 (KJV) »
GOD’S WORD® (GW)
Numbers 10 (GW) »
World English Bible
Numbers 10 (WEB) »
Louis Segond 1910
Nombres 10 (LSG) »
Luther Bibel 1912
Numeri 10 (LUTH1912) »
इंडियन रिवाइज्ड वर्जन - हिंदी
गिनती 10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 10 (PANIRV) »
ভারতীয় সংশোধিত সংস্করণ - বাংলা
গননা 10 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 10 (TAMIRV) »
इंडियन रिवाइज्ड वर्जन - मराठी
गणना 10 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 10 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 10 (GUJIRV) »
الكتاب المقدس باللغة العربية، فان دايك
اَلْعَدَد 10 (AVD) »
תנ ך עברי מודרני
במדבר 10 (HEB) »
Bíblia Sagrada Português
Números 10 (BSL) »
Kinh Thánh: Tiếng Việt
Dân Số 10 (VIE) »
Reina Valera Antigua
Números 10 (RVA) »
La Sacra Bibbia
Numeri 10 (RIV) »
圣 经 简体中文和合本
民 数 记 10 (CUVS) »
聖 經 繁體中文和合本
民 數 記 10 (CUVT) »
Bibla e Shenjtë
Numrat 10 (ALB) »
Svenska Bibeln 1917
4 Mosebok 10 (SV1917) »
Библия на русском
Числа 10 (RUSV) »
Українська Біблія
Числа 10 (UKR) »
Szent Biblia - Magyar
4 Mózes 10 (KAR) »
Българска Библия
Числа 10 (BULG) »
聖書 日本語
民数記 10 (JPN) »
Biblia Takatifu
Hesabu 10 (SWHULB) »
Kitaabka Quduuska Ah
Tirintii 10 (SOM) »
De Heilige Schrift
Numberi 10 (NLD) »

ಅರಣ್ಯಕಾಂಡ (KANIRV) Chapter Selection

KANIRV Book Selection List