ಕೀರ್ತನೆಗಳು Chapter 104 KANIRV Bible Verse Images

ಕೀರ್ತನೆಗಳು 104 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೀರ್ತನೆಗಳು 104 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೀರ್ತನೆಗಳು 104:1 (KANIRV)
Square Portrait Landscape 4K UHD
ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.

ಕೀರ್ತನೆಗಳು 104:2 (KANIRV)
Square Portrait Landscape 4K UHD
ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.

ಕೀರ್ತನೆಗಳು 104:3 (KANIRV)
Square Portrait Landscape 4K UHD
ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.

ಕೀರ್ತನೆಗಳು 104:4 (KANIRV)
Square Portrait Landscape 4K UHD
ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.

ಕೀರ್ತನೆಗಳು 104:5 (KANIRV)
Square Portrait Landscape 4K UHD
ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.

ಕೀರ್ತನೆಗಳು 104:6 (KANIRV)
Square Portrait Landscape 4K UHD
ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.

ಕೀರ್ತನೆಗಳು 104:7 (KANIRV)
Square Portrait Landscape 4K UHD
ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,

ಕೀರ್ತನೆಗಳು 104:8 (KANIRV)
Square Portrait Landscape 4K UHD
ಪರ್ವತಗಳು ಎದ್ದವು; ತಗ್ಗುಗಳು ಇಳಿದವು.

ಕೀರ್ತನೆಗಳು 104:9 (KANIRV)
Square Portrait Landscape 4K UHD
ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, ನೀನು ಮೇರೆಗಳನ್ನು ಗೊತ್ತುಮಾಡಿದಿ.

ಕೀರ್ತನೆಗಳು 104:10 (KANIRV)
Square Portrait Landscape 4K UHD
ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ.

ಕೀರ್ತನೆಗಳು 104:11 (KANIRV)
Square Portrait Landscape 4K UHD
ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.

ಕೀರ್ತನೆಗಳು 104:12 (KANIRV)
Square Portrait Landscape 4K UHD
ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.

ಕೀರ್ತನೆಗಳು 104:13 (KANIRV)
Square Portrait Landscape 4K UHD
ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ.

ಕೀರ್ತನೆಗಳು 104:14 (KANIRV)
Square Portrait Landscape 4K UHD
ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,

ಕೀರ್ತನೆಗಳು 104:15 (KANIRV)
Square Portrait Landscape 4K UHD
ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.

ಕೀರ್ತನೆಗಳು 104:16 (KANIRV)
Square Portrait Landscape 4K UHD
ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.

ಕೀರ್ತನೆಗಳು 104:17 (KANIRV)
Square Portrait Landscape 4K UHD
ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.

ಕೀರ್ತನೆಗಳು 104:18 (KANIRV)
Square Portrait Landscape 4K UHD
ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.

ಕೀರ್ತನೆಗಳು 104:19 (KANIRV)
Square Portrait Landscape 4K UHD
ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು.

ಕೀರ್ತನೆಗಳು 104:20 (KANIRV)
Square Portrait Landscape 4K UHD
ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ.

ಕೀರ್ತನೆಗಳು 104:21 (KANIRV)
Square Portrait Landscape 4K UHD
ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.

ಕೀರ್ತನೆಗಳು 104:22 (KANIRV)
Square Portrait Landscape 4K UHD
ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.

ಕೀರ್ತನೆಗಳು 104:23 (KANIRV)
Square Portrait Landscape 4K UHD
ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ; ಸಾಯಂಕಾಲದವರೆಗೆ ದುಡಿಯುತ್ತಾನೆ.

ಕೀರ್ತನೆಗಳು 104:24 (KANIRV)
Square Portrait Landscape 4K UHD
ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.

ಕೀರ್ತನೆಗಳು 104:25 (KANIRV)
Square Portrait Landscape 4K UHD
ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.

ಕೀರ್ತನೆಗಳು 104:26 (KANIRV)
Square Portrait Landscape 4K UHD
ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.

ಕೀರ್ತನೆಗಳು 104:27 (KANIRV)
Square Portrait Landscape 4K UHD
ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.

ಕೀರ್ತನೆಗಳು 104:28 (KANIRV)
Square Portrait Landscape 4K UHD
ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; ನೀನು ಕೈತೆರೆಯಲು ಅವು ಒಳ್ಳೇಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.

ಕೀರ್ತನೆಗಳು 104:29 (KANIRV)
Square Portrait Landscape 4K UHD
ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.

ಕೀರ್ತನೆಗಳು 104:30 (KANIRV)
Square Portrait Landscape 4K UHD
ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.

ಕೀರ್ತನೆಗಳು 104:31 (KANIRV)
Square Portrait Landscape 4K UHD
ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.

ಕೀರ್ತನೆಗಳು 104:32 (KANIRV)
Square Portrait Landscape 4K UHD
ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.

ಕೀರ್ತನೆಗಳು 104:33 (KANIRV)
Square Portrait Landscape 4K UHD
ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.

ಕೀರ್ತನೆಗಳು 104:34 (KANIRV)
Square Portrait Landscape 4K UHD
ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.

ಕೀರ್ತನೆಗಳು 104:35 (KANIRV)
Square Portrait Landscape 4K UHD
ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.

Available Bible Translations

American Standard Version
Psalms 104 (ASV) »
King James Version
Psalms 104 (KJV) »
GOD’S WORD® (GW)
Psalms 104 (GW) »
World English Bible
Psalms 104 (WEB) »
Louis Segond 1910
Psaumes 104 (LSG) »
Luther Bibel 1912
Psalm 104 (LUTH1912) »
इंडियन रिवाइज्ड वर्जन - हिंदी
भजन संहिता 104 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 104 (PANIRV) »
ভারতীয় সংশোধিত সংস্করণ - বাংলা
গীতমালা 104 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 104 (TAMIRV) »
इंडियन रिवाइज्ड वर्जन - मराठी
स्तोत्रसंहिता 104 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 104 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 104 (GUJIRV) »
الكتاب المقدس باللغة العربية، فان دايك
اَلْمَزَامِيرُ 104 (AVD) »
תנ ך עברי מודרני
תהלים 104 (HEB) »
Bíblia Sagrada Português
Salmos 104 (BSL) »
Kinh Thánh: Tiếng Việt
Thánh Thi 104 (VIE) »
Reina Valera Antigua
Salmos 104 (RVA) »
La Sacra Bibbia
Salmi 104 (RIV) »
圣 经 简体中文和合本
诗 篇 104 (CUVS) »
聖 經 繁體中文和合本
詩 篇 104 (CUVT) »
Bibla e Shenjtë
Psalmet 104 (ALB) »
Svenska Bibeln 1917
Psaltaren 104 (SV1917) »
Библия на русском
Псалтирь 104 (RUSV) »
Українська Біблія
Псалми 104 (UKR) »
Szent Biblia - Magyar
Zsoltárok 104 (KAR) »
Българска Библия
Псалми 104 (BULG) »
聖書 日本語
詩篇 104 (JPN) »
Kitaabka Quduuska Ah
Sabuurradii 104 (SOM) »
De Heilige Schrift
Psalmen 104 (NLD) »
Dansk Bibel 1871
Salme 104 (DA1871) »

KANIRV Book Selection List