ಕೀರ್ತನೆಗಳು Chapter 89 KANIRV Bible Verse Images

ಕೀರ್ತನೆಗಳು 89 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೀರ್ತನೆಗಳು 89 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೀರ್ತನೆಗಳು 89:1 (KANIRV)
Square Portrait Landscape 4K UHD
ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.

ಕೀರ್ತನೆಗಳು 89:2 (KANIRV)
Square Portrait Landscape 4K UHD
ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.

ಕೀರ್ತನೆಗಳು 89:3 (KANIRV)
Square Portrait Landscape 4K UHD
ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,

ಕೀರ್ತನೆಗಳು 89:4 (KANIRV)
Square Portrait Landscape 4K UHD
‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. ಸೆಲಾ

ಕೀರ್ತನೆಗಳು 89:5 (KANIRV)
Square Portrait Landscape 4K UHD
ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.

ಕೀರ್ತನೆಗಳು 89:6 (KANIRV)
Square Portrait Landscape 4K UHD
ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?

ಕೀರ್ತನೆಗಳು 89:7 (KANIRV)
Square Portrait Landscape 4K UHD
ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.

ಕೀರ್ತನೆಗಳು 89:8 (KANIRV)
Square Portrait Landscape 4K UHD
ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.

ಕೀರ್ತನೆಗಳು 89:9 (KANIRV)
Square Portrait Landscape 4K UHD
ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.

ಕೀರ್ತನೆಗಳು 89:10 (KANIRV)
Square Portrait Landscape 4K UHD
ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.

ಕೀರ್ತನೆಗಳು 89:11 (KANIRV)
Square Portrait Landscape 4K UHD
ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.

ಕೀರ್ತನೆಗಳು 89:12 (KANIRV)
Square Portrait Landscape 4K UHD
ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.

ಕೀರ್ತನೆಗಳು 89:13 (KANIRV)
Square Portrait Landscape 4K UHD
ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.

ಕೀರ್ತನೆಗಳು 89:14 (KANIRV)
Square Portrait Landscape 4K UHD
ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.

ಕೀರ್ತನೆಗಳು 89:15 (KANIRV)
Square Portrait Landscape 4K UHD
ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.

ಕೀರ್ತನೆಗಳು 89:16 (KANIRV)
Square Portrait Landscape 4K UHD
ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.

ಕೀರ್ತನೆಗಳು 89:17 (KANIRV)
Square Portrait Landscape 4K UHD
ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.

ಕೀರ್ತನೆಗಳು 89:18 (KANIRV)
Square Portrait Landscape 4K UHD
ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.

ಕೀರ್ತನೆಗಳು 89:19 (KANIRV)
Square Portrait Landscape 4K UHD
ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ಕೀರ್ತನೆಗಳು 89:20 (KANIRV)
Square Portrait Landscape 4K UHD
ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.

ಕೀರ್ತನೆಗಳು 89:21 (KANIRV)
Square Portrait Landscape 4K UHD
ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.

ಕೀರ್ತನೆಗಳು 89:22 (KANIRV)
Square Portrait Landscape 4K UHD
ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.

ಕೀರ್ತನೆಗಳು 89:23 (KANIRV)
Square Portrait Landscape 4K UHD
ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.

ಕೀರ್ತನೆಗಳು 89:24 (KANIRV)
Square Portrait Landscape 4K UHD
ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.

ಕೀರ್ತನೆಗಳು 89:25 (KANIRV)
Square Portrait Landscape 4K UHD
ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.

ಕೀರ್ತನೆಗಳು 89:26 (KANIRV)
Square Portrait Landscape 4K UHD
ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.

ಕೀರ್ತನೆಗಳು 89:27 (KANIRV)
Square Portrait Landscape 4K UHD
ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.

ಕೀರ್ತನೆಗಳು 89:28 (KANIRV)
Square Portrait Landscape 4K UHD
ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.

ಕೀರ್ತನೆಗಳು 89:29 (KANIRV)
Square Portrait Landscape 4K UHD
ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.

ಕೀರ್ತನೆಗಳು 89:30 (KANIRV)
Square Portrait Landscape 4K UHD
ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,

ಕೀರ್ತನೆಗಳು 89:31 (KANIRV)
Square Portrait Landscape 4K UHD
ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ,

ಕೀರ್ತನೆಗಳು 89:32 (KANIRV)
Square Portrait Landscape 4K UHD
ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.

ಕೀರ್ತನೆಗಳು 89:33 (KANIRV)
Square Portrait Landscape 4K UHD
ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.

ಕೀರ್ತನೆಗಳು 89:34 (KANIRV)
Square Portrait Landscape 4K UHD
ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.

ಕೀರ್ತನೆಗಳು 89:35 (KANIRV)
Square Portrait Landscape 4K UHD
ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.

ಕೀರ್ತನೆಗಳು 89:36 (KANIRV)
Square Portrait Landscape 4K UHD
ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,

ಕೀರ್ತನೆಗಳು 89:37 (KANIRV)
Square Portrait Landscape 4K UHD
ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” ಸೆಲಾ.

ಕೀರ್ತನೆಗಳು 89:38 (KANIRV)
Square Portrait Landscape 4K UHD
ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ, ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.

ಕೀರ್ತನೆಗಳು 89:39 (KANIRV)
Square Portrait Landscape 4K UHD
ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.

ಕೀರ್ತನೆಗಳು 89:40 (KANIRV)
Square Portrait Landscape 4K UHD
ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.

ಕೀರ್ತನೆಗಳು 89:41 (KANIRV)
Square Portrait Landscape 4K UHD
ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.

ಕೀರ್ತನೆಗಳು 89:42 (KANIRV)
Square Portrait Landscape 4K UHD
ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.

ಕೀರ್ತನೆಗಳು 89:43 (KANIRV)
Square Portrait Landscape 4K UHD
ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.

ಕೀರ್ತನೆಗಳು 89:44 (KANIRV)
Square Portrait Landscape 4K UHD
ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.

ಕೀರ್ತನೆಗಳು 89:45 (KANIRV)
Square Portrait Landscape 4K UHD
ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. ಸೆಲಾ

ಕೀರ್ತನೆಗಳು 89:46 (KANIRV)
Square Portrait Landscape 4K UHD
ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?

ಕೀರ್ತನೆಗಳು 89:47 (KANIRV)
Square Portrait Landscape 4K UHD
ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.

ಕೀರ್ತನೆಗಳು 89:48 (KANIRV)
Square Portrait Landscape 4K UHD
ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ

ಕೀರ್ತನೆಗಳು 89:49 (KANIRV)
Square Portrait Landscape 4K UHD
ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?

ಕೀರ್ತನೆಗಳು 89:50 (KANIRV)
Square Portrait Landscape 4K UHD
ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.

ಕೀರ್ತನೆಗಳು 89:51 (KANIRV)
Square Portrait Landscape 4K UHD
ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.

ಕೀರ್ತನೆಗಳು 89:52 (KANIRV)
Square Portrait Landscape 4K UHD
ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.

Available Bible Translations

American Standard Version
Psalms 89 (ASV) »
King James Version
Psalms 89 (KJV) »
GOD’S WORD® (GW)
Psalms 89 (GW) »
World English Bible
Psalms 89 (WEB) »
Louis Segond 1910
Psaumes 89 (LSG) »
Luther Bibel 1912
Psalm 89 (LUTH1912) »
इंडियन रिवाइज्ड वर्जन - हिंदी
भजन संहिता 89 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 89 (PANIRV) »
ভারতীয় সংশোধিত সংস্করণ - বাংলা
গীতমালা 89 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 89 (TAMIRV) »
इंडियन रिवाइज्ड वर्जन - मराठी
स्तोत्रसंहिता 89 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 89 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 89 (GUJIRV) »
الكتاب المقدس باللغة العربية، فان دايك
اَلْمَزَامِيرُ 89 (AVD) »
תנ ך עברי מודרני
תהלים 89 (HEB) »
Bíblia Sagrada Português
Salmos 89 (BSL) »
Kinh Thánh: Tiếng Việt
Thánh Thi 89 (VIE) »
Reina Valera Antigua
Salmos 89 (RVA) »
La Sacra Bibbia
Salmi 89 (RIV) »
圣 经 简体中文和合本
诗 篇 89 (CUVS) »
聖 經 繁體中文和合本
詩 篇 89 (CUVT) »
Bibla e Shenjtë
Psalmet 89 (ALB) »
Svenska Bibeln 1917
Psaltaren 89 (SV1917) »
Библия на русском
Псалтирь 89 (RUSV) »
Українська Біблія
Псалми 89 (UKR) »
Szent Biblia - Magyar
Zsoltárok 89 (KAR) »
Българска Библия
Псалми 89 (BULG) »
聖書 日本語
詩篇 89 (JPN) »
Det Norsk Bibel
Salmene 89 (NORSK) »
Biblia Takatifu
Zaburi 89 (SWHULB) »
Kitaabka Quduuska Ah
Sabuurradii 89 (SOM) »
De Heilige Schrift
Psalmen 89 (NLD) »
Dansk Bibel 1871
Salme 89 (DA1871) »

KANIRV Book Selection List