ಪ್ರಕಟಣೆ Chapter 22 KANIRV Bible Verse Images

ಪ್ರಕಟಣೆ 22 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಪ್ರಕಟಣೆ 22 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಪ್ರಕಟಣೆ 22:1 (KANIRV)
Square Portrait Landscape 4K UHD
ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,

ಪ್ರಕಟಣೆ 22:2 (KANIRV)
Square Portrait Landscape 4K UHD
ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.

ಪ್ರಕಟಣೆ 22:3 (KANIRV)
Square Portrait Landscape 4K UHD
ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.

ಪ್ರಕಟಣೆ 22:4 (KANIRV)
Square Portrait Landscape 4K UHD
ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.

ಪ್ರಕಟಣೆ 22:5 (KANIRV)
Square Portrait Landscape 4K UHD
ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.

ಪ್ರಕಟಣೆ 22:6 (KANIRV)
Square Portrait Landscape 4K UHD
ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.

ಪ್ರಕಟಣೆ 22:7 (KANIRV)
Square Portrait Landscape 4K UHD
“ಇಗೋ ನೋಡು! ನಾನುಅತಿಬೇಗನೆ ಬರುತ್ತೇನೆ!ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.

ಪ್ರಕಟಣೆ 22:8 (KANIRV)
Square Portrait Landscape 4K UHD
ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.

ಪ್ರಕಟಣೆ 22:9 (KANIRV)
Square Portrait Landscape 4K UHD
ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.

ಪ್ರಕಟಣೆ 22:10 (KANIRV)
Square Portrait Landscape 4K UHD
ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.

ಪ್ರಕಟಣೆ 22:11 (KANIRV)
Square Portrait Landscape 4K UHD
ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”

ಪ್ರಕಟಣೆ 22:12 (KANIRV)
Square Portrait Landscape 4K UHD
“ನೋಡು! ನಾನು ಬೇಗನೇ ಬರುತ್ತೇನೆ.ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ.

ಪ್ರಕಟಣೆ 22:13 (KANIRV)
Square Portrait Landscape 4K UHD
ನಾನೇಆದಿಯೂ, ಅಂತ್ಯವೂ,ಮೊದಲನೆಯವನೂ, ಕಡೆಯವನೂ,ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.

ಪ್ರಕಟಣೆ 22:14 (KANIRV)
Square Portrait Landscape 4K UHD
“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆಜೀವವೃಕ್ಷದ ಹಕ್ಕು ಇರುವುದು.ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.

ಪ್ರಕಟಣೆ 22:15 (KANIRV)
Square Portrait Landscape 4K UHD
ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂಹೊರಗಿರುವರು” ಎಂದು ಹೇಳಿದನು.

ಪ್ರಕಟಣೆ 22:16 (KANIRV)
Square Portrait Landscape 4K UHD
“ಯೇಸುವೆಂಬ ನಾನುನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನುದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂಅವನ ಸಂತತಿಯೂಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”

ಪ್ರಕಟಣೆ 22:17 (KANIRV)
Square Portrait Landscape 4K UHD
ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.

ಪ್ರಕಟಣೆ 22:18 (KANIRV)
Square Portrait Landscape 4K UHD
ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.

ಪ್ರಕಟಣೆ 22:19 (KANIRV)
Square Portrait Landscape 4K UHD
ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.

ಪ್ರಕಟಣೆ 22:20 (KANIRV)
Square Portrait Landscape 4K UHD
ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.

ಪ್ರಕಟಣೆ 22:21 (KANIRV)
Square Portrait Landscape 4K UHD
ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!

Available Bible Translations

American Standard Version
Revelation 22 (ASV) »
King James Version
Revelation 22 (KJV) »
GOD’S WORD® (GW)
Revelation 22 (GW) »
World English Bible
Revelation 22 (WEB) »
Louis Segond 1910
Apocalypse 22 (LSG) »
इंडियन रिवाइज्ड वर्जन - हिंदी
प्रकाशितवाक्य 22 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪਰਕਾਸ਼ ਦੀ ਪੋਥੀ 22 (PANIRV) »
ভারতীয় সংশোধিত সংস্করণ - বাংলা
पপ্রত্যাদেশ 22 (BENIRV) »
இந்தியன் ரீவைஸ்டு வேர்ஷன் - தமிழ்
வெளிப்படுத்தின விசேஷம் 22 (TAMIRV) »
इंडियन रिवाइज्ड वर्जन - मराठी
प्रकटीकरण 22 (MARIRV) »
ఇండియన్ రేవిజ్డ్ వెర్షన్ - తెలుగు
ప్రకటన గ్రంథం 22 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રકટીકરણ 22 (GUJIRV) »
الكتاب المقدس باللغة العربية، فان دايك
رُؤيا 22 (AVD) »
תנ ך עברי מודרני
ההתגלות 22 (HEB) »
Bíblia Sagrada Português
Apocalipse 22 (BSL) »
Kinh Thánh: Tiếng Việt
Khải Huyền 22 (VIE) »
Reina Valera Antigua
Apocalipsis 22 (RVA) »
圣 经 简体中文和合本
启 示 录 22 (CUVS) »
聖 經 繁體中文和合本
启 示 录 22 (CUVT) »
Bibla e Shenjtë
Zbulesa 22 (ALB) »
Библия на русском
Откровение 22 (RUSV) »
Українська Біблія
Об'явлення 22 (UKR) »
Szent Biblia - Magyar
Jelenések 22 (KAR) »
Българска Библия
Откровение 22 (BULG) »
Biblia Takatifu
Ufunuo 22 (SWHULB) »
Kitaabka Quduuska Ah
Muujintii 22 (SOM) »
De Heilige Schrift
Openbaring 22 (NLD) »

ಪ್ರಕಟಣೆ (KANIRV) Chapter Selection

KANIRV Book Selection List